ದೈಹಿಕ ಶಿಕ್ಷಕನಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಮುಕ ಪಿ.ಟಿ ಟೀಚರ್ ಬಂಧನ
ಬೆಂಗಳೂರು: ದೈಹಿಕ ಶಿಕ್ಷಕನಿಂದ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಹೆಬ್ಬಾಳ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸ್ಫೋಟಕ ಸಂಗತಿ ಬಯಲಾಗಿದೆ.
ಸರ್ಕಾರಿ ಶಾಲೆ ದೈಹಿಕ ಶಿಕ್ಷಕ ಅಂಜಿನಪ್ಪ ಶಾಲೆಯ 13 ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈಗಾಗಲೇ ಅಂಜಿನಪ್ಪನನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.
8 ತಿಂಗಳ ಹಿಂದಷ್ಟೇ ಹೆಬ್ಬಾಳ ಠಾಣೆ ವ್ಯಾಪ್ತಿಯ ಸರ್ಕಾರಿ ಶಾಲೆಗೆ ವರ್ಗಾವಣೆಗೊಂಡಿದ್ದ 55 ವರ್ಷದ ದೈಹಿಕ ಶಿಕ್ಷಕ ಅಂಜಿನಪ್ಪ ಹಲವು ತಿಂಗಳಿನಿಂದ ಮಕ್ಕಳಿಗೆ ಪಾಠ ಹೇಳಿಕೊಡುವ ನೆಪದಲ್ಲಿ ಕೃತ್ಯ ಎಸಗಿದ್ದಾನೆ. ಬಾಲಕಿಯರು ನೀಡಿದ್ದ ಮಾಹಿತಿ ಆಧರಿಸಿ ಶಾಲೆಯ ಮುಖ್ಯ ಶಿಕ್ಷಕರೇ ಠಾಣೆಗೆ ದೂರು ನೀಡಿದ್ದು ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ಅಂಜಿನಪ್ಪ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಂಜಿನಪ್ಪ ಆಟ, ಪಾಠದ ನೆಪದಲ್ಲಿ ಬಾಲಕಿಯರನ್ನು ತನ್ನ ಬಳಿ ಕರೆಸಿಕೊಂಡು ವಿದ್ಯಾರ್ಥಿನಿಯರಿಗೆ ಮುತ್ತು ಕೊಡುವುದು, ಮೈ-ಕೈ ಮುಟ್ಟಬಾರದ ಜಾಗದಲ್ಲಿ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ.