50 ರ ಅಂಕಲ್ ಜೊತೆ 19 ರ ಕಾಲೇಜು ವಿದ್ಯಾರ್ಥಿನಿ ಗೆ(ಲವ) ಪ್ರೇಮ ಅಂಕುರ, ಪ್ರೀತಿಗೆ ಕುಟುಂಬದಿಂದ ವಿರೋಧ: ಅಂಕಲ್ ಜೊತೆ ಆತ್ಮಹತ್ಯೆ
ಕೊರಟಗೆರೆ: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ.
ಅನನ್ಯ (19), ರಂಗಶಾಮಣ್ಣ (50) ಮೃತ ಪ್ರೇಮಿಗಳು.
ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಇಬ್ಬರೂ ಪ್ರೇಮಿಗಳ ಶವ ಪತ್ತೆಯಾಗಿದೆ.
ಶನಿವಾರ ಮಾವತ್ತೂರು ಕೆರೆಯ ದಡದಲ್ಲಿ ಇಬ್ಬರ ಚಪ್ಪಲಿ ಹಾಗೂ ಮೊಬೈಲ್ ಪತ್ತೆಯಾಗಿತ್ತು. ಇಂದು ಬೆಳಗ್ಗೆ ಇಬ್ಬರ ಶವ ಪತ್ತೆಯಾಗಿದೆ.
ಕೊಳಾಲ ಹೋಬಳಿ ಲಕ್ಕಯ್ಯನಪಾಳ್ಯದ ಅನನ್ಯ ಹಾಗೂ ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಳೆದ 4 ದಿನಗಳ ಹಿಂದೆ ಇಬ್ಬರು ಪ್ರೇಮಿಗಳು ಮನೆಯಿಂದ ನಾಪತ್ತೆಯಾಗಿದ್ದರು. ತಮ್ಮ ಪ್ರೀತಿಗೆ ಕುಟುಂಬದವರ ವಿರೋಧ ವ್ಯಕ್ತಪಡಿಸಿದ್ದರಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಕೊಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.