ಶಿವಮೊಗ್ಗದಲ್ಲಿ ನಡೆದ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆಯಲ್ಲಿ ಉಡುಪಿ ಕಿನಾರಾ ಮೀನುಗಾರ ಉತ್ಪಾದಕರ ಕಂಪನಿಯ ಮೀನಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ.
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮೀನುಗಾರಿಕಾ ಇಲಾಖೆ ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ *ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ* ಯು ಇಲ್ಲಿನ ಕೃಷಿ ಮಹಾವಿದ್ಯಾಲಯದಲ್ಲಿ ಜರುಗಿತು. ಕಾರ್ಯಕ್ರಮವನ್ನು ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್ ಎನ್ ಚನ್ನಬಸಪ್ಪ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ. ಹೆಮಾ ನಾಯಕ್- ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ನವುಲೆ ಇದರ ನಿರ್ದೇಶಕ ಡಾ. ಪ್ರದೀಪ್ ಎಸ್. ಹಾಗೂ ಕರ್ನಾಟಕ ಸಹಕಾರಿ ಮೀನುಗಾರಿಕೆ ಮಹಾಮಂಡಳಿ ಮೈಸೂರು ಇದರ ನಿರ್ದೇಶಕರಾದ ರಾಮಯ್ಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಜಲಾನಯನ ಇಲಾಖೆ, ಮೀನುಗಾರಿಕಾ ಇಲಾಖೆ ಹಾಗೂ ಸ್ಕೊಡವೆಸ್ ಸಂಸ್ಥೆಯ ಸಹಯೋಗದಲ್ಲಿ ರಚಿತವಾದ ಉಡುಪಿ ಜಿಲ್ಲೆಯ ಉಡುಪಿಕಿನಾರ ಮೀನುಗಾರರ ಉತ್ಪಾದಕ ಕಂಪನಿಯ ಉತ್ಪನ್ನಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿಕಿನಾರ ಮೀನುಗಾರರ ಉತ್ಪಾದಕ ಕಂಪನಿಯ ನಿರ್ದೇಶಕ ಸುದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉಪನಿರ್ದೇಶಕರು .ಜಿ.ಎಂ. ಶಿವಕುಮಾರ್,
ಪ್ರಾಸ್ತವಿಕ ನುಡಿಗಳನ್ನಾಡಿದರಲ್ಲದೇ ಉಡುಪಿ ಕಿನಾರ ಮೀನುಗಾರ ಉತ್ಪಾದಕರ ಕಂಪನಿಯ ಮೀನಿನ ಮೌಲ್ಯವರ್ಧಿತ ಉತ್ಪನ್ನಗಳನ್ನು ಶಿವಮೊಗ್ಗದಲ್ಲಿ ಸ್ಥಳೀಯ ಮೀನುಗಾರ ಉತ್ಪಾದಕ ಕಂಪನಿಯ ಮೂಲಕ ಮಾರಾಟ ಮಾಡಲು ಅವಕಾಶ ಕಲ್ಪಿಸಲು ಸಹಕರಿಸುವುದಾಗಿ ನುಡಿದರು. ಕೆಳದಿ ಶಿವಪ್ಪ ಕೃಷಿ, ತೋಟಗಾರಿಕಾ .ವಿ.ವಿಯ ಒಳನಾಡು ಮೀನುಗಾರಿಕೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಾಂತನಗೌಡ ಎ.ಎಚ್. ಸ್ವಾಗತಿಸಿದರು. ಮೀನುಗಾರಿಕೆ ಸಹಾಯಕ ನಿರ್ದೇಶಕ ರಾಘವೇಂದ್ರ ಕೆ ಎಸ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಮೀನು ಕೃಷಿಕರು, ಮೀನು ಉತ್ಪಾದಕ ಕಂಪನಿಗಳ ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಕರು ಹಾಜರಿದ್ದರು.