ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ಗುಡ್ಡ ಕುಸಿತ ಸ್ಥಳಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜೇಯೇಂದ್ರ ಭೇಟಿ- ಮೃತರ ಕುಟುಂಬಗಳಿಗೆ ಮತ್ತು ಸೂರು ಕಳೆದುಕೊಂಡವರಿಗೆ ತತಕ್ಷಣ ಸೂಕ್ತ ಹಾಗೂ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಕ್ಕೆ ಒತ್ತಾಯ
ಅಂಕೋಲಾ-ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ಗುಡ್ಡ ಕುಸಿದು ಹಲವರು ಸಾವನ್ನಪ್ಪಿದ್ದ ಸ್ಥಳಕ್ಕೆ ಇಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜೇಯೇಂದ್ರ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿದರು. ನಂತರ ಉಳುವರೆಯಲ್ಲಿನ ಸಂಕಷ್ಟಿತ ಜನರನ್ನು ಭೇಟಿಯಾಗಿ ಅವರ ಅಹವಾಲು ಸ್ವೀಕರಿಸಿ ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸದ್ಯ ಅಂಕೋಲಾ ಶಿರೂರಿನ ಗುಡ್ಡ ಕುಸಿತ ಸ್ಥಳದಲ್ಲಿ ನಡೆಯುತ್ತಿರುವ ರಸ್ತೆ ತೆರವು ಕಾರ್ಯಾಚರಣೆ ಮತ್ತು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಿ, ಈ ಅನಿರೀಕ್ಷಿತ ದುರ್ಘಟನೆಯಲ್ಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ, ಮನೆ ಹಾನಿಗೊಳಗಾದವರಿಗೆ ಹಾಗೂ ಸೂರು ಕಳೆದುಕೊಂಡವರಿಗೆ ತಡ ಮಾಡದೇ ತತಕ್ಷಣ ಸೂಕ್ತ ಹಾಗೂ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಹರತಾಳು ಹಾಲಪ್ಪನವರು, ಶಾಸಕರಾದ ಶ್ರೀ ದಿನಕರ್ ಶೆಟ್ಟಿ, ಮಾಜಿ ಶಾಸಕರಾದ ಶ್ರೀಮತಿ ರೂಪಾಲಿ ನಾಯ್ಕ್, ಭಟ್ಕಳದ ಮಾಜಿ ಶಾಸಕ ಶ್ರೀ ಸುನಿಲ್ ನಾಯ್ಕ್, ರಾಜ್ಯ ಕಾರ್ಯದರ್ಶಿ ಶ್ರೀ ಶರಣು ತಳ್ಳೀಕೇರಿ ಸೇರಿದಂತೆ ಸ್ಥಳೀಯ ಬಿಜೆಪಿ ಮಲ್ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.