ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಗೇಟ್ ರದ್ದು
ಮಂಗಳೂರು-ಟೋಲ್’ಗೇಟ್ ಅನ್ನು ರದ್ದುಪಡಿಸುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರ್ಇ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.
ಕಳೆದ 17 ದಿನಗಳಿಂದ ಸುರತ್ಕಲ್ ಟೋಲ್’ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಈ ಮಧ್ಯೆ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.