ಬೆಂಗಳೂರು-ಮಾರಕಾಸ್ತ್ರಗಳಿಂದ ಹೊಡೆದು ಯುವಕನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ನಡೆದಿದೆ.
ತಮಿಳುನಾಡಿನ ವೆಲೂರು ಮೂಲದ ನಟರಾಜ್ (35) ಕೊಲೆಯಾದ ಯುವಕ.ನಟರಾಜ್ ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ತೆರಳಿದ್ದ. ಈ ವೇಳೆ ದುಷ್ಕರ್ಮಿಗಳು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ.
ನಟರಾಜ್ ಮತ್ತು ಆತನ ಸ್ನೇಹಿತರು ಶ್ರೀಮಂಜುನಾಥ್ ಎಂಟರ್ಪ್ರೈಸಸ್ ಎಂಬ ಬಿಲ್ಡಿಂಗ್ ಮೇಲೆ ಪಾರ್ಟಿ ಮಾಡಿದ್ದು, ನಟರಾಜ್ ಗೆ ಇಲ್ಲಿಯೇ ಕೊಲೆ ಮಾಡಲಾಗಿದೆ. ಇನ್ನು ಹತ್ಯೆ ಬಳಿಕ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.