ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಪಿಡಿಒ ಈರಣ್ಣ
ಶಿಗ್ಗಾಂವಿ : ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ನಾರಾಯಣಪುರದ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಈರಣ್ಣ ಗಾಣಿಗಿ ಮಳೆಯಿಂದ ಬಿದ್ದ ಮನೆಗೆ ಪರಿಹಾರ ಬಿಡುಗಡೆ ಮಾಡಲು ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಮುನವಳ್ಳಿ ಗ್ರಾಮದ ಸಂಗಪ್ಪ ಎಂಬುವವರು ಮನೆ ಹಾನಿಗೆ ಪರಿಹಾರ
ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಮನೆ ನಿರ್ಮಾಣಕ್ಕೆ ವರ್ಕ್ ಆರ್ಡರ್ ನೀಡಲು ಪಿಡಿಒ ಒಟ್ಟು 50 ಸಾವಿರ ರೂ. ಬೇಡಿಕೆಯಿಟ್ಟಿದ್ದರು . ಅದರಂತೆ ನ. 10 ರಂದು ಮುಂಗಡ ಹಣವಾಗಿ 20
ಸಾವಿರ ರೂ. ಹಣ ಪಡೆದಿದ್ದರು. ಇಂದು ಮತ್ತೆ 20 ಸಾವಿರ ರೂ. ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಸಂಬಂಧ
ಹಾವೇರಿ ಲೋಕಾಯುಕ್ತರ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.