5 ಲಕ್ಷ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಕಡು ಭ್ರಷ್ಟ ತಹಸೀಲ್ದಾರ್ ವರ್ಷಾ ಮನೆ ಮೇಲೆ ಲೋಕಾಯುಕ್ತರ ದಾಳಿ
ಬೆಂಗಳೂರು: ಖಾತೆ ಮಾಡಿ ಕೊಡೋದಕ್ಕಾಗಿ ಲಂಚ ಸ್ವೀಕರಿಸುವ ವೇಳೆಯಲ್ಲಿಯೇ, ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.ಮಂಗಳವಾರ ರಾತ್ರಿ ಲೋಕಾಯುಕ್ತ ಪೊಲೀಸರು ಮತ್ತು ಅಧಿಕಾರಿಗಳು ನಗರದ ಚಂದ್ರ ಲೇ ಔಟ್ ನಲ್ಲಿರುವ ವರ್ಷಾ ಅವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಮತ್ತು ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂದಿದ್ದಾರೆ.
ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಖಾತೆ ಮಾಡಿ ಕೊಡೋದಕ್ಕಾಗಿ 5 ಲಕ್ಷ ಲಂಚ ಸ್ವೀಕರಿಸುವ ವೇಳೆಯಲ್ಲಿ ತಹಶೀಲ್ದಾರ್ ವರ್ಷಾ ಎಂಬ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಾರೆ.
ತಹಶೀಲ್ದಾರ್ ವರ್ಷಾ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಸಿ ಕೊಡೋ ಸಲುವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಇಂದು 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿಯೇ ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.