ಬೆಂಗಳೂರು- ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ರಾಜ್ಯ ಮಾಹಿತಿ ಹಕ್ಕು ಕಾರ್ಯಕರ್ತರ ದಿನಾಚರಣೆ ಕಾರ್ಯಕ್ರಮದಲ್ಲಿ ಭಟ್ಕಳ ದ *ಸಾಮಾಜಿಕ ಕಾರ್ಯಕರ್ತ ನಾಗೇಶ ನಾಯ್ಕ ಹೊನ್ನೆಗದ್ದೆ ಇವರಿಗೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ವತಿಯಿಂದ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ ಅವರ ಅಮೃತ ಹಸ್ತದಿಂದ ವಿಚಾರ ಕ್ರಾಂತಿ ರತ್ನ ಪ್ರಶಸ್ತಿ* ನೀಡಿ ಗೌರವಿಸಲಾಯಿತು.
ನಾಗೇಶ ನಾಯ್ಕ ಇವರು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಭಟ್ಕಳ ಪ್ರಧಾನ ಕಾರ್ಯದರ್ಶಿ ಕಾರ್ಯ ನಿರ್ವಹಿಸುತ್ತಿದ್ದು ಭಟ್ಕಳದ ಹಲವು ಭ್ರಷ್ಟಾಚಾರ ಪ್ರಕರಣ ಗಳನ್ನು ಮಾಹಿತಿ ಹಕ್ಕಿನ ಮೂಲಕ ಬೆಳಕಿಗೆ ತಂದಿದ್ದರು. ನಾಗೇಶ ನಾಯ್ಕ ಅವರು ನಾನು ಮಾಡಿದಂತ ಹೋರಾಟಗಳಿಗೆ ನನ್ನ ಜೊತೆ ಜೊತೆಯಾಗಿ ನಿಂತು ಸಹಕರಿಸಿದ ಮಾಹಿತಿ ಹಕ್ಕು ಕಾರ್ಯಕರ್ತ ರ ರಾಜ್ಯ ಸಂಘಟನೆಗೂ ,ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ಶಂಕರ ನಾಯ್ಕ ಮತ್ತು ತಾಲ್ಲೂಕು ಅಧ್ಯಕ್ಷರಾದ ನಾಗೇಂದ್ರ ನಾಯ್ಕ ಹಾಗೂ ಉಪಾಧ್ಯಕ್ಷರಾದ ವಸಂತ ದೇವಡಿಗ ಹಾಗೂ ಎಲ್ಲಾ ಪದಾಧಿಕಾರಿಗಳು ತುಂಬು ಹೃದಯದ ಧನ್ಯವಾದಗಳು ಸಲ್ಲಿಸಿದಲದ್ದಾರೆ.