*ಶ್ರೀ ಚರಣ್ ಸಹಕಾರ ಬ್ಯಾಂಕ್ ನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ವಿ.ದ್ವಾರಕಾನಾಥ್ ಅವರ ಮುಡಿಗೆ “ಸಹಕಾರ ರತ್ನ” ಪ್ರಶಸ್ತಿ*
*ಬೆಂಗಳೂರು,-* *ಶ್ರೀ ಚರಣ್ ಸಹಕಾರ ಬ್ಯಾಂಕ್ ನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ವಿ.ದ್ವಾರಕಾನಾಥ್* ಅವರು ಕರ್ನಾಟಕ ರಾಜ್ಯ ಸಹಕಾರ ಚಳುವಳಿಯ ಬೆಳವಣಿಗೆಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ “ಸಹಕಾರ ರತ್ನ” ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳ ನಿ., ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಹಿಳಾ ಮಹಾಮಂಡಳ ಮತ್ತು ಸಹಕಾರ ಇಲಾಖೆ ಹಾಗೂ ಎಲ್ಲಾ ರೀತಿಯ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿಗಳ ಸಂಯುಕ್ತಾಶ್ರಯದಲ್ಲಿ ನವೆಂಬರ್ 19 ರಂದು ಆಯೋಜಿಸಲಾಗಿರುವ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.
ನವೆಂಬರ್ 19ರಂದು ಕೆಂಗೇರಿ ಉಪನಗರದಲ್ಲಿರುವ ಗಣೇಶ ಮೈದಾನದಲ್ಲಿ ಈ ಸಮಾರಂಭ ನಡೆಯಲಿದ್ದು, ಸಹಕಾರ ಸಚಿವರಾದ ಎಸ್. ಟಿ ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಿ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಾಗೇ ಸಹಕಾರ ಮಂಡಳಿಯ ಶಾಸಕರು ಹಾಗೂ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಅವರು ಸಹಕಾರ ಧ್ವಜಾರೋಹಣ ಮಾಡಲಿದ್ದು ಸಂಸದರಾದ ಡಿ,ವಿ. ಸದಾನಂದಗೌಡ ಅವರು ಯಶಸ್ವಿನಿ ಯೋಜನೆಯ ಗುರುತಿನ ಚೀಟಿ ವಿತರಣೆ ಮಾಡಲಿದ್ದಾರೆ. ಶಾಸಕ ಹೆಚ್.ಸಿ. ಗೋಪಿನಾಥ ರೆಡ್ಡಿ ಸಹಕಾರ ಪತ್ರಿಕೆ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳಿ ನಿರ್ದೇಶಕರಾದ ಬೈರಪ್ಪ ಗೌಡ , ದೊಡ್ಡನಾಗಯ್ಯ ಮತ್ತೀತರ ಗಣ್ಯರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.