ಕಾರ್ಕಳ ಕ್ಷೇತ್ರದಿಂದ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ,ಹಿಂದೂ ಮುಖಂಡ ಪ್ರಮೋದ್ ಮುತಾಲಿಕ ಅವರು ಸ್ಪರ್ಧೆ
ಕಾರ್ಕಳ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು. ಇಂದು ತಾನು ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ.
ಮುತಾಲಿಕ್ ಚುನಾವಣೆ ತಯಾರಿ ಹಿನ್ನೆಲೆ ಮಾದ್ಯಮಗಳ ಮುಂದೆ ಹೆಚ್ಚು ಮಾತನಾಡುತ್ತಿದ್ದರು. ಮೈಕ್ ಬ್ಯಾನ್, ಹಿಜಾಬ್, ವ್ಯಾಪಾರ ಬಹಿಷ್ಕಾರ ಸೇರಿ ಹಲವು ವಿಚಾರಗಳ ಬಗ್ಗೆ ಹೇಳಿಕೆ ಕೊಡುತ್ತಿದ್ದರು.
ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತು.
ಇದೀಗ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಪ್ರಮೋದ್ ಮುತಾಲಿಕ್ ಹೇಳಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ವಿರುದ್ಧ ಸ್ಪರ್ಧೆ ನೀಡಲಿದ್ದಾರೆ ಎನ್ನಲಾಗಿದೆ. ಮುತಾಲಿಕ್ ಸ್ಪರ್ಧೆ ಬಿಜೆಪಿಗೆ ದೊಡ್ಡ ಸಮಸ್ಯೆಯಾಗಲಿದೆ ಎನ್ನಲಾಗಿದೆ.
ಇದಲ್ಲದೆ ಶ್ರೀರಾಮ ಸೇನೆ ವತಿಯಿಂದ ಕೆಲವೊಂದು ಕ್ಷೇತ್ರಗಳಲ್ಲಿ ಸ್ವಾಮೀಜಿಗಳು ಸೇರಿ 25 ಮಂದಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.