ಬೆಳಗಾವಿ : ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆಯಾಗಿದೆ. ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಮಕ್ಕಳು ಹಾಗೂ ತಾಯಿ ಶವ ಪತ್ತೆಯಾಗಿದೆ.
ತನುಜಾ ಪರಸಪ್ಪ ಗೋಡಿ(32), ಸುದೀಪ್(4), ರಾಧಿಕಾ(3) ಶವವಾಗಿ ಸಿಕ್ಕರು. ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ನಿವಾಸಿ ತನುಜಾ ಮಕ್ಕಳನ್ನ ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಸದ್ಯ ಸವದತ್ತಿ ತಾಲೂಕು ಆಸ್ಪತ್ರೆಗೆ ಶವಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.