ಮಂಗಳೂರಿನಲ್ಲಿ ಆಟೋದಲ್ಲಿ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ದಾಳಿಗೆ ಸಂಚು ಎಂದ ಡಿಜಿಪಿ: ಡಿಜಿಪಿ ಟ್ವೀಟ್
ಮಂಗಳೂರು;ಆಟೋ ರಿಕ್ಷಾದಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು, ಡಿಜಿಪಿ ಮಹತ್ವದ ಟ್ವೀಟ್ ಮಾಡಿದ್ದಾರೆ.
ದಾಳಿಯ ಸಂಚು ದೃಢಪಟ್ಟಿದೆ.ಸ್ಫೋಟವು ಆಕಸ್ಮಿಕವಲ್ಲ . ಗಂಭೀರ ಹಾನಿಯನ್ನುಂಟುಮಾಡುವ ಉದ್ದೇಶದಿಂದ ಭಯೋತ್ಪಾದನೆಯ ಕೃತ್ಯವಾಗಿದೆ. ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ಡಿಜಿಪಿ ಟ್ವೀಟ್ ಮಾಡಿದ್ದಾರೆ.
ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿ ಪರಿಶೀಲನೆ ವೇಳೆ ಆಟೋದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮಂಗಳೂರು ಕಮಿಷನರ್ ಶಶಿಕುಮಾರ್ ನಿನ್ನೆ ಮಾತನಾಡಿ ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ, ಹೆಚ್ಚಿನ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದರು.ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ತೆರಳಿ ಪರಿಶೀಲನೆ ನಡೆಸಿತ್ತು.
ಆಟೋದಲ್ಲಿ ಬ್ಯಾಟರಿ, ನಟ್ಟು ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತಯಾಗಿರುವ ಬಗ್ಗೆ ವರದಿಯಾಗಿದೆ.ಆಟೋದಲ್ಲಿ ದಿಡೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣವೂ ನಿರ್ಮಾಣವಾಗಿತ್ತು.