ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿ ಒಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ ಇಂದು ನಡೆದಿದೆ.
ನಾವುಂದ ಗಣೇಶನಗರ ನಿವಾಸಿ ಗೋವಿಂದ ಖಾರ್ವಿ (70) ಎಂದು ತಿಳಿದು ಬಂದಿದೆ.
ಇವರು ನಾವುಂದ ಬಳಿಯ ಮಸ್ಕಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ವೇಗದಿಂದ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಗೋವಿಂದ ಖಾರ್ವಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಂದೂರು ಠಾಣೆಯ ಪೆÇಲೀಸರು ಘಟನಾ ಸ್ಥಳಕ್ಕೆ ಭೇಟಿ ಸ್ಥಳ ಮಹಜರು ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.