ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿ ಕೊಂಡು ಪರಾರಿಯಾಗಿದ್ದ ಮೊಬೈಲ್ ಅಂಗಡಿ ಕಳವು ಪ್ರಕರಣದ ಭಟ್ಕಳ ಮೂಲದ
ಮುಹಮ್ಮದ್ ರಾಹೀಕ್ ಮುಂಬಯಿಯಲ್ಲಿ ಬಂಧನ
ಕುಂದಾಪುರ: ಕಳೆದ ತಿಂಗಳ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿ ಕೊಂಡು ಪರಾರಿಯಾಗಿದ್ದ ಮೊಬೈಲ್ ಅಂಗಡಿ ಕಳವು ಪ್ರಕರಣದ ಭಟ್ಕಳ ಮೂಲದ ಆರೋಪಿಯನ್ನು ಕುಂದಾಪುರ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಭಟ್ಕಳ ಮೂಲದ ಮುಹಮ್ಮದ್ ರಾಹೀಕ್(22) ಎಂದು ಗುರುತಿಸಲಾಗಿದೆ. ಈತ ಕುಂದಾಪುರ ನಗರ ಠಾಣೆ ವ್ಯಾಪ್ತಿಯ ಬೀಜಾಡಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಮೊಬೈಲ್ ಅಂಗಡಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದನು.
ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಈತನನ್ನು ಅ.20ರಂದು ಪೊಲೀಸರು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಜೈಲಿನ ಮುಖ್ಯ ದ್ವಾರದ ಬಳಿ ಜೀಪಿನಿಂದ ಇಳಿಯುವಾಗ ಈತ ಪೊಲೀಸರನ್ನು ದೂಡಿ ಹಾಕಿ ಪರಾರಿಯಾಗಿದ್ದನು. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.