ಹಿಂದೂ ಪದದ ಅರ್ಥ ಅಶ್ಲೀಲ ,ತನ್ನ ಹೇಳಿಕೆ ಹಿಂಪಡೆದ ಮಾಜಿ ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂದು ಹೇಳಿಕೆ ನೀಡಿದ್ದ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬಗ್ಗೆ ಬಿಜೆಪಿ ಸೇರಿದಂತೆ ಜೆಡಿಎಸ್ ನಿಂದಲೂ ವ್ಯಾಪಕ ವಿರೋಧ, ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದು, ಜನತೆಯಲ್ಲಿ ವಿಷಾದವನ್ನು ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಹಿಂದೂ ಪದದ ಬಗ್ಗೆ ತಾವು ಹೇಳಿದ್ದಂತ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೇ ವಿಷಾಧಿಸುತ್ತೇನೆ ಎಂದಿದ್ದಾರೆ.
ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರವನ್ನು ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮ ಹೇಳಿಕೆಯಲ್ಲಿ ತಪ್ಪು ಇದೆಯಾ ಎನ್ನುವ ಬಗ್ಗೆ ತನಿಖೆ ನಡೆಸುವಂತೆಯೂ ಕೋರಿದ್ದಾರೆ.