ನಾಳೆ ಯಲ್ಲಾಪುರದಲ್ಲಿ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ.
ಯಲ್ಲಾಪುರ: ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನ ಡಿಸೆಂಬರ್ ೫, ಸೋಮವಾರ ಮುಂಜಾನೆ ೧೦ ಗಂಟೆಗೆ ಯಲ್ಲಾಪುರ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಕರೆಯಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೂಢೀಕರಿಸಿ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತು ಭೂಮಿ ಹಕ್ಕಿಗೆ ಅಗ್ರಹಿಸಿ ಡಿಸೆಂಬರ್ ೧೭ ರಂದು ಶಿರಸಿಯಲ್ಲಿ ರಾಜ್ಯಮಟ್ಟದ ಅರಣ್ಯವಾಸಿಗಳ ರ‍್ಯಾಲಿ ಸಂಘಟಿಸಲಾಗಿರುವ ಹಿನ್ನೆಲೆಯಲ್ಲಿ, ಅಸಮರ್ಪಕ ಜಿಪಿಎಸ್ ಮೇಲ್ಮನವಿ ಅಭಿಯಾನ ಹಾಗೂ ಅರಣ್ಯ ಸಿಬ್ಬಂದಿಗಳಿAದ ಉಂಟಾಗುತ್ತಿರುವ ದೌರ್ಜನ್ಯ, ಕಿರುಕುಳ ಕುರಿತು ಚರ್ಚಿಸಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಣ, ಆಸಕ್ತ ಅರಣ್ಯ ಅತಿಕ್ರಮಣದಾರರು ಯಲ್ಲಾಪುರ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಗೆ ಹಾಜರಾಗಲು ರವೀಂದ್ರ ನಾಯ್ಕ ಕೋರಿದ್ದಾರೆ.