ಲಿಂಗತ್ವಧಾರಿತ ದೌರ್ಜನ್ಯ ನಿವಾರಣೆಗೊಳಿಸಲು ಮುಂಡಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ವಿಶೇಷ ಮಹಿಳಾ ಗ್ರಾಮ ಸಭೆ
ಭಟ್ಕಳ-ಲಿಂಗತ್ವಧಾರಿತ ದೌರ್ಜನ್ಯ ನಿವಾರಣೆಗೊಳಿಸಲು ಗುರುವಾರ ಮುಂಡಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ವಿಶೇಷ ಮಹಿಳಾ ಗ್ರಾಮ ಸಭೆ ಹಮ್ಮಿಕೊಳ್ಳಲಾಗಿತ್ತು ಸದ್ರಿ ಸಭೆಯಲ್ಲಿ ಮಾನ್ಯ ಅಧ್ಯಕ್ಷರಾದ ನಾಗಪ್ಪ ನಾರಾಯಣ್ ನಾಯ್ಕ ರವರು ಅಧ್ಯಕ್ಷತೆಯನ್ನು ವಹಿಸಿದ್ದರು ಸಭೆಯಲ್ಲಿ ಉಪಾಧ್ಯಕ್ಷರು ಸರ್ವ ಸದಸ್ಯರು ಆಶಾ ಅಂಗನವಾಡಿ ಕಾರ್ಯಕರ್ತರು ಒಕ್ಕೂಟದ ಸದಸ್ಯರು ಒಕ್ಕೂಟದ ಅಧ್ಯಕ್ಷರು ಹಾಗೂ ಇಲಾಖೆ ಅಧಿಕಾರಿಗಳು ಆಗಮಿಸಿದ್ದರು. ಮಹಿಳೆಯರ ಲಿಂಗತ್ವ ವಿಷಯದ ಕುರಿತಾಗಿ ಮತ್ತು ಆರೋಗ್ಯದ ಕುರಿತಾಗಿ ವಿಷಯ ಚರ್ಚೆ ನಡೆಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪೌಷ್ಟಿಕ ಆಹಾರದ ಬಗ್ಗೆ ತಿಳುವಳಿಕೆ ಮೂಡಿಸಲಾಯಿತು. ನಂತರ ಪಂಚಾಯತ್ ಆವರಣದಲ್ಲಿ ಜಾಥಕೆ ಚಾಲನೆ ನೀಡಲಾಯಿತು.