ಕಾರು, ಬಸ್, ಬೈಕ್ ನಡುವೆ ಸರಣಿ ಅಪಘಾತ-ಓರ್ವ ಸಾವು, ಇಬ್ಬರು ಗಂಭೀರ
ಕಾರವಾರ: ಕಾರು, ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ತಾಲೂಕಿನ ಮಲ್ಲಾಪುರ ಬಳಿ ಸಂಭವಿಸಿದೆ.
ಬಾಳ್ನಿಯ ಸತ್ಯಂ ಗೋವಿಂದ ನಾಯ್ಕ(19) ಮೃತಪಟ್ಟ ಯುವಕ. ಮಕ್ಕಳನ್ನು ಶಾಲೆಗೆ ಬಿಡಲು ಬಂದಿದ್ದ.ವೇಳೆ ಬೈಕ್, ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತವಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಬಸ್ಸಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈತನ ಜೊತೆ ಇದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೂಡ ಬಸ್’ಗೆ ಗುದ್ದಿದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕದ್ರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.