ಫೆಬ್ರವರಿ ೧೭ರ ಶುಕ್ರವಾರ ಮುರುಡೇಶ್ವರದಲ್ಲಿ ಭಟ್ಕಳ ತಾಲೂಕು ಸಾಹಿತ್ಯ ಸಮ್ಮೇಳನ.
ಭಟ್ಕಳ: ಭಟ್ಕಳ ತಾಲೂಕಿನ ೧೦ ನೇಯ ಸಾಹಿತ್ಯ ಸಮ್ಮೇಳನವು ಫೆಬ್ರವರಿ ೧೭ರ ಶುಕ್ರವಾರದಂದು ಶ್ರೀ ಕ್ಷೇತ್ರ ಮುರುಡೇಶ್ವರದಲ್ಲಿ ನಡೆಯಲಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ. ನಾಡಿನ ಇತಿಹಾಸ ಪ್ರಸಿದ್ಧ ಧಾರ್ಮಿಕಕ್ಷೇತ್ರ ಹಾಗೂ ಪ್ರವಾಸಿ ತಾಣವಾಗಿರುವ ಮುರುಡೇಶ್ವರದ ಡಾ.ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ನಡೆಯುವ ಈ ನುಡಿ ಸಮ್ಮೇಳನದಲ್ಲಿ ಎಲ್ಲ ಕನ್ನಡದ ಮನಸುಗಳು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.