ಭಟ್ಕಳ: ಭಟ್ಕಳ ತಾಲೂಕಾ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ೨೫ ನೇ ತಾರೀಖಿನ ಬುಧವಾರ ಮುಂಜಾನೆ ೧೦ ಗಂಟೆಗೆ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆಯಲಿದೆ. ಈ ಸಭೆಗೆ ಸಮಿತಿ ಸದಸ್ಯರು,ಜನಪ್ರತಿನಿದಿಗಳು,ಅಧಿಕಾರಿಗಳು,ತಾಲೂಕಿನ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳು ಪಾಲ್ಗೊಂಡು ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಕೋರಿದ್ದಾರೆ.