ಭಟ್ಕಳ ಕನ್ನಡ ಸಾಹಿತ್ಯ ಸಮ್ಮೇಳದ ಯಶಸ್ವಿಗೆ ಎಲ್ಲರೂ ಕೈಜೋಡಿಸೋಣ : ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್.
ಭಟ್ಕಳ.: ಮುರ್ಡೇಶ್ವರದಲ್ಲಿ ಫೆಬ್ರವರಿ ೧೭ ನೇ ತಾರೀಖಿನಂದು ನಡೆಯಲಿರುವ ಭಟ್ಕಳ ತಾಲೂಕಾ ೧೦ ನೇ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಕೈಜೋಡಿಸೋಣ ಎಂದು ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್.ನುಡಿದರು. ಸಾಹಿತ್ಯ ಸಮ್ಮೇಳನದ ಪೂರ್ವಸಿದ್ಧತೆಗೆ ಸಂಬಂಧಿಸಿದಂತೆ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ಪೂರ್ವಸಿಧ್ಧತಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಸಾಹಿತ್ಯ ಸಮ್ಮೇಳನವನ್ನು ವ್ಯವಸ್ಥಿತವಾಗಿ ಅಯೋಜಿಸಲು ವಿವಿಧ ಇಲಾಖೆಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಕುರಿತು ತಿಳಿಸಿದರಲ್ಲದೇ ಸಮ್ಮೇಳನದ ಮೆರವಣಿಗೆಗಳಲ್ಲಿ ವಿವಿಧ ಇಲಾಖೆಗಳು ವ್ಯವಸ್ಥೆಗೊಳಿಸುವ ಸ್ತಬ್ದ ಚಿತ್ರಗಳಲ್ಲಿ ಭಟ್ಕಳದ ಇತಿಹಾಸ, ಪರಂಪರೆಯನ್ನು ಬಿಂಬಿಸುವ ಅಂಶಗಳಿರಲಿ ಎಂದು ಸೂಚಿಸಿದರಲ್ಲದೇ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಕರೆ ನೀಡಿದರು. ಸಭೆಯ ಆರಂಭದಲ್ಲಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಎಲ್ಲರನ್ನು ಸ್ವಾಗತಿಸಿ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮದ ವಿವರಗಳನ್ನು ಸಭೆಗೆ ನೀಡಿ ಸಮ್ಮೇಳನಕ್ಕೆ ತಗುಲುವ ಖರ್ಚುವೆಚ್ಛಗಳು, ಪೂರ್ವಙಾವಿಯಾಗಿ ಮಾಡಿಕೊಳ್ಳಬೇಕಾದ ಸಿದ್ಧತೆಗಳ ಕುರಿತು ತಿಳಿಸಿ ಎಲ್ಲರು ಸಲಹೆ ಸೂಚನೆ, ಸಹಕಾರ ನೀಡುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಕೋರಿದರು. ಸಭೆಯಲ್ಲಿ ತಹಶೀಲ್ದಾರ ಅಶೋಕ ಭಟ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ., ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ರಾಮಚಂದ್ರ ವೆರ್ಣೇಕರ, ಹಿರಿಯ ಸಾಹಿತಿ ಡಾ.ಆರ್.ವಿ.ಸರಾಫ್, ಭಟ್ಕಳ ಅರ್ಬನ ಬ್ಯಾಂಕಿನ ಉಪಾಧ್ಯಕ್ಷ ಎಂ.ಆರ್.ನಾಯ್ಕ, ಕಸಾಪ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಪಿ.ಬಂಢಾರಿ, ವೆಂಕಟೇಶ ನಾಯ್ಕ ಆಸರಕೇರಿ, ನ್ಯೂ ಇಂಗ್ಲೀಷ ಪ.ಪೂ.ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ಶಾನಭಾಗ, ಅಮೃತ ರಾಮರಥ, ಮುರ್ಡೇಶ್ವರ ಗ್ರಾಮೀಣ ಪ್ರತಿಷ್ಠಾನದ ಅಧ್ಯಕ್ಷ ಎಸ್.ಎಸ್.ಕಾಮತ್, ಲಯನ್ಸ ಕ್ಲಬ್ ಅಧ್ಯಕ್ಷ ಎಂ.ವಿ.ಹೆಗಡೆ, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ರಮೇಶ ನಾಯ್ಕ, ಸ್ಪಂದನ ಚಾರಿಟೇಬಲ್ ಟ್ರಸ್ಟ, ಕ್ರಿಯಾಶೀಲ ಗೆಳೆಯರ ಸಂಘದ ಕಾರ್ಯದರ್ಶಿ ಪಾಂಡುರಂಗ ನಾಯ್ಕ, ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲೆ ಭಾಗೀರಥಿ ನಾಯ್ಕ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಮೋಹನ ನಾಯ್ಕ, ಶಿಕ್ಷಣ ಇಲಾಖೆ, ಲೋಕೋಪಯೋಗಿ, ಆರೋಗ್ಯ, ಹೆಸ್ಕಾಂ, ಅಗ್ನಿಶಾಮಕ, ಅರಣ್ಯ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.