ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ ಮಾರ್ಚ ೧ ಕ್ಕೆ
ಭಟ್ಕಳ.: ಫೆಬ್ರವರಿ ೧೭ರಂದು ನಿಗದಿ ಪಡಿಸಿದ್ದ ಭಟ್ಕಳ ತಾಲೂಕಾ ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅನಿವಾರ್ಯ ಕಾರಣಗಳಿಂದ ಮಾರ್ಚ ಒಂದನೇ ತಾರೀಖಿನ ಬುಧವಾರಕ್ಕೆ ಮುಂದೂಡಲಾಗಿದೆ. ಮುರ್ಡೇಶ್ವರದ ಡಾ.ಆರ್.ಎನ್.ಎಸ್. ಸಭಾಭವನದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲ ಕನ್ನಡದ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಕೋರಿದ್ದಾರೆ.