ಭಟ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದ ಶಾಸಕ ಸುನೀಲ್ ನಾಯ್ಕ
ಭಟ್ಕಳ ತಾಲೂಕಾ ೧೦ನೇ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ, ಶಾಸಕ ಸುನೀಲನಾಯ್ಕ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹತ್ತು ಹಲವು ಕನ್ನಡಪರ ಕಾರ್ಯಕ್ರಮಗಳನ್ನು ಸಂಘಟಿಸಿ ಜಿಲ್ಲೆಯ ಅತ್ಯಂತ ಕ್ರಿಯಾಶೀಲ ತಾಲೂಕು ಘಟಕವಾಗಿ ಕಾರ್ಯ ನಿರ್ವಹಿಸುತ್ತಿರುವುದು ಸಂತಸದ ವಿಷಯ. ಇದೀಗ ಭಟ್ಕಳ ತಾಲೂಕಾ ೧೦ ನೇ ಕನ್ನಡ ಸಾಹಿತ್ಯ ಸಮ್ಮೇಳನವುಇದೇ ಬರುವ ಮಾರ್ಚ ಒಂದನೇ ತಾರೀಕಿನ ಬುಧವಾರ ಮುರ್ಡೇಶ್ವರದ ಆರ್.ಎನ್.ಎಸ್.ಸಭಾಭವನದಲ್ಲಿ ನಡೆಯಲಿದೆ. ಸಾಹಿತಿ ಮಾನಾಸುತ ಶಂಭಹೆಗಡೆ ಸಮ್ಮೇಳನದ ಸರ್ವಾಧ್ಯಕ್ಷತೆ ವಹಸಲಿದ್ದಾರೆ. ತಾಲೂಕಿನ ಎಲ್ಲ ಸಾಹಿತ್ಯಾಸಕ್ತರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ಕಾರ್ಯದರ್ಶಿ ನಾರಾಯಣ ನಾಯ್ಕ, ಕೋಶಾಧ್ಯಕ್ಷ ಶ್ರೀಧರ ಶೇಟ್, ಕಾರ್ಯಕಾರಿ ಸಮಿತಿ ಸದಸ್ಯ ಸಂತೋಷ ಆಚಾರ್ಯ ಉಪಸ್ಥಿತರಿದ್ದರು.