ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಟ್ಕಳ ಜೆಡಿಎಸ್ ಅಭ್ಯರ್ಥಿ ,ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ
ಗೋಕರ್ಣ: ಭಟ್ಕಳ ಜೆಡಿಎಸ್ ಅಭ್ಯರ್ಥಿ ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ ಅವರು ಗೋಕರ್ಣದ ಅಶೋಕೆಗೆ ಆಗಮಿಸಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಈ ಬಾರಿ ಗೆಲ್ಲಲೇಬೇಕೆಂದು ಹಠ ತೊಟ್ಟಿರುವ ನಾಗೇಂದ್ರ ನಾಯ್ಕ ಇಡೀ ಕ್ಷೇತ್ರವನ್ನು ಸುತ್ತಾಡಿ ಪ್ರಚಾರ ನಡೆಸುತ್ತಿದ್ದಾರೆ. ಹಾಗೇ ಹಿರಿಯ ವ್ಯಕ್ತಿಗಳನ್ನು ಮತ್ತು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ತಮ್ಮ ನಾಮಧಾರಿ ಸಮುದಾಯದ ಪ್ರಮುಖರ ಒತ್ತಾಯದ ಮೇರೆಗೆ ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿದ್ದರು. ಈ ಬಾರಿ ಜೆಡಿಎಸ್ನಿಂದ ಕಣಕ್ಕಿಳಿದಿರುವ ಇವರು ತಮ್ಮ ಗೆಲುವನ್ನು ಗಿಟ್ಟಿಸಿಕೊಳ್ಳಲು ಸಕಲ ಪ್ರಯತ್ನ ಮಾಡುತ್ತಿದ್ದಾರೆ.ಬಿಜೆಪಿಯ ಅತೃಪ್ತರು ಮತ್ತು ಕಾಂಗ್ರೆಸ್ ಅತೃಪ್ತ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿಯಾಗಿ ತಮಗೆ ಬೆಂಬಲಿಸುವಂತೆ ಮನ ಒಲಿಸಿದ್ದಾರೆ.