ಭಟ್ಕಳ ತಾಲೂಕಿನ ಯಲ್ವಡಿ -ಕವೂರ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದ ಭಟ್ಕಳ-ಹೊನ್ನವಾರ ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ,ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ
ಭಟ್ಕಳ- ಭಟ್ಕಳ-ಹೊನ್ನವಾರ ವಿಧಾನಸಭಾ ಜೆಡಿಎಸ್ ಅಭ್ಯರ್ಥಿ ,ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ ಅವರು ತಮ್ಮ ಕುಟುಂಬ ಸಮೇತ ಇಂದು ಬೆಳಿಗ್ಗೆ 8 ಗಂಟೆಗೆ ಭಟ್ಕಳ ತಾಲೂಕಿನ ಯಲ್ವಡಿ -ಕವೂರ ಮತಗಟ್ಟೆಯಲ್ಲಿ ತಮ್ಮ ಮತದಾನ ಮಾಡಿದರು. ನಂತರ ಅವರು ಮಾತನಾಡಿ ತಮ್ಮ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಟ್ಕಳ ಜನತೆ ಬದಲಾವಣೆ ಬಯಸಿದ್ದಾರೆ ಎಂದು ತಿಳಿಸಿದರು.ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ತಮ್ಮ ಮತದಾನ ಮಾಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕ ಅಧ್ಯಕ್ಷರಾದ ವಕೀಲ ಮಂಜುನಾಥ ಗೊಂಡ ಉಪಸ್ಥಿತರಿದ್ದರು.