ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾದ ಯುವಕ
ಯಲ್ಲಾಪುರ-ತಾಲೂಕಿನ ತೇಲಂಗಾರ ಗ್ರಾಮದ ಯುವಕನೋರ್ವ ಮದುವೆಯಾಗಲು ಕನೈ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಸಾವಿಗೆ ಶರಣಾಗಿರುವ ನಡೆದಿದೆ.
ನಾಗರಾಜ ಗಣಪತಿ ಗಾಂವ್ಕರ (35) ಮೃತ ವ್ಯಕ್ತಿಯಾಗಿದ್ದು ಈತ ಕೃಷಿ ಕೆಲಸ ಮಾಡಿಕೊಂಡಿದ್ದ. ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಅಂತ ಮನನೊಂದಿದ್ದ. ಈ ಹಿನ್ನೆಲೆಯಲ್ಲಿ ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.