ಹೊನ್ನಾವರ ಫ್ರೆಂಡ್ಸ್ ಎನ್ನುವ ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಭಟ್ಕಳ ಬಿಜೆಪಿ ಮಂಡಲದಿಂದ ಪೊಲೀಸ್ ದೂರು
ಭಟ್ಕಳ -ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ದೇಶದ ಹೆಮ್ಮೆಯ ಪ್ರಧಾನಿಮಂತ್ರಿ ಶ್ರೀ ನರೇಂದ್ರ ಮೋದಿಯವರ ಬಗ್ಗೆ ಹೊನ್ನಾವರ ಫ್ರೆಂಡ್ಸ್ ಎಂಬ ಹೆಸರಿನ ವಾಟ್ಸಾಪ್ ಗ್ರೂಪ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಗೂ ಮೇಸೆಜ್ ಗಳನ್ನು ಹಾಕಿರುವ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಇಂದು ಶನಿವಾರ ಮಧ್ಯಾಹ್ನ 12-30 ಕ್ಕೆ ಭಟ್ಕಳ ಶಹರ ಠಾಣೆಯಲ್ಲಿ ಭಟ್ಕಳ ಮಂಡಲ ಬಿಜೆಪಿ ವತಿಯಿಂದ ಪೋಲಿಸ್ ದೂರನ್ನು ನೀಡಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ಸುಬ್ರಾಯ ದೇವಾಡಿಗ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಗೋವಿಂದ ನಾಯ್ಕ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಮತಿ ಶಿವಾನಿ ಭಟ್ಕಳ, ಮಾಜಿ ಸೈನಿಕರ ಪ್ರಕೋಷ್ಟ ಜಿಲ್ಲಾ ಸಂಚಾಲಕ ಶ್ರೀ ಶ್ರೀಕಾಂತ ನಾಯ್ಕ, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ಭಾಸ್ಕರ ದೈಮನೆ, ಮಂಡಲ ಕಾರ್ಯದರ್ಶಿ ಶ್ರೀ ಶ್ರೀನಿವಾಸ ನಾಯ್ಕ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಶ್ರೀ ವೆಂಕಟೇಶ ನಾಯ್ಕ ಮೊದಲಾದವರು ಹಾಜರಿದ್ದರು.