*ಚನ್ನಕೇಶವ ಪ್ರೌಢಶಾಲೆಯ ಆವರಣದಲ್ಲಿ ಹಣ್ಣಿನ ಗಿಡ ನೆಟ್ಟು ವನಮಹೋತ್ಸವ ಆಚರಣೆ
ಹೊನ್ನಾವರ: ತಾಲೂಕಿನ ಕರ್ಕಿ ಚನ್ನಕೇಶವ ಪ್ರೌಢ ಶಾಲೆಯಲ್ಲಿ ವನಮಹೋತ್ಸವ ಆಚರಣೆ ಮಾಡಲಾಯಿತು.
ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಉಪನ್ಯಾಸಕರಾದ ಶ್ರೀ ಜಿ.ಪಿ.ಶೇಟ್ ರವರು ಶಾಲೆಯ ಆವರಣದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಚನ್ನಕೇಶವ ಪ್ರೌಢ ಶಾಲೆ ಹಾಗೂ ಶರಾವತಿ ಇಕೋ ಕ್ಲಬ್ ಹೊನ್ನಾವರ ಇದರ ಸಂಯೋಗದಲ್ಲಿ ವನಮಹೋತ್ಸವ ಆಚರಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಎಲ್. ಎಂ. ಹೆಗಡೆ, ಸಹ ಶಿಕ್ಷಕರುಗಳಾದ ಶ್ರೀ ಶ್ರೀಕಾಂತ ಹಿಟ್ನಳ್ಳಿ, ಶ್ರೀಮತಿ ಸೀಮಾ ಭಟ್ಟ, ಮುಕ್ತ ನಾಯ್ಕ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.