ವಕೀಲ ಮಂಜುನಾಥ ಗೊಂಡ ಭಟ್ಕಳ ತಾಲೂಕ ಜೆಡಿಎಸ್ ತಾಲೂಕ ಅಧ್ಯಕ್ಷ ಹುದ್ದೆಗೆ ರಾಜೀನಾಮೆ
ಭಟ್ಕಳ- ಭಟ್ಕಳ ತಾಲೂಕ ಜೆಡಿಎಸ್ ತಾಲೂಕ ಅಧ್ಯಕ್ಷ ಹುದ್ದೆಗೆ ತಾನು ತನ್ನ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ವಕೀಲ ಮಂಜುನಾಥ ಗೊಂಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರು ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಅವರಿಗೆ ಪತ್ರ ಬರೆದು ತಾನು ತನ್ನ ವೈಯಕ್ತಿಕ ಕಾರಣಗಳಿಂದ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಭಟ್ಕಳ ತಾಲೂಕ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.