ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಟ್ಕಳ ತಾಲೂಕಿನ ಮುರುಡೇಶ್ವರ ವಲಯದಿಂದ ಸತ್ಯನಾರಾಯಣ ಪೂಜಾ ಕಾರ್ಯಕ್ರಮ
ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಭಟ್ಕಳ ತಾಲೂಕಿನ ಮುರುಡೇಶ್ವರ ವಲಯದ ಸತ್ಯನಾರಾಯಣ ಪೂಜಾ ಸಮಿತಿಯ ಸಹಯೋಗದೊಂದಿಗೆ ಹವ್ಯಕ ಸಭಾಭವನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಉತ್ತರ ಕನ್ನಡ ಜಿಲ್ಲೆಯ ಮಾನ್ಯ ನಿರ್ದೇಶಕರಾದ ಶ್ರೀಯುತ ಬಾಬು ನಾಯ್ಕ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಯೋಜನೆಯ ಕಾರ್ಯಕ್ರಮಗಳ ಪರಿಚಯ ಮಾಡಿದರು.
ಈ ಸಂದರ್ಭದಲ್ಲಿ ಹಿಂದೆ ಜವಾಬ್ದಾರಿ ನಿರ್ವಹಿಸಿದ ಪದಾಧಿಕಾರಿಗಳು ಆಯ್ಕೆಯಾದಂತಹ ನೂತನ ಪದಾಧಿಕಾರಿಗಳಿಗೆ ತಾಂಬೂಲ ನೀಡುವ ಮೂಲಕ ಜವಾಬ್ದಾರಿ ಹಸ್ತಾಂತರ ಮಾಡಿದರು.
ಕಾರ್ಯಕ್ರಮದಲ್ಲಿ ಡಾ. ಕೇಶವ ಕಿರಣ್ ಭಟ್ ರವರು ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್ ಎಸ್ ಕಾಮತ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಾಗವೇಣಿ ಮತ್ತು ಶ್ರೀಮತಿ ನಾಗರತ್ನ ರವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಶ್ರೀ ಸತೀಶ್ ಶೆಟ್ ರವರು ವಲಯದಲ್ಲಿ ಉತ್ತಮ ಧಾರ್ಮಿಕ ಕಾರ್ಯಕ್ರಮ ಅನುಷ್ಠಾನ ಮಾಡಲು ಅವಕಾಶ ಕೊಟ್ಟ ಪೂಜ್ಯರಿಗೆ ಅಭಿನಂದನೆ ಸಲ್ಲಿಸಿದರು. ತಾಲೂಕಿನ ಮಾನ್ಯ ಯೋಜನಾಧಿಕಾರಿಗಳಾದ ಶ್ರೀ ಗಣೇಶ ನಾಯ್ಕ ರವರು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ವಲಯದ ಮೇಲ್ವಿಚಾರಕರಾದ ಶ್ರೀ ಗಣೇಶ್ ಗೌಡ ರವರು ವಂದಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ವಿನೋದಾ ಬಾಲಚಂದ್ರ ರವರು ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಶಕುಂತಲಾ ಸಂಗಡಿಗರು ಪ್ರಾರ್ಥಿಸಿದರು. *ಕಾರ್ಯಕ್ರಮದವಿಶೇಷತೆ*
*ನೂರಕ್ಕೂ ಹೆಚ್ಚು ದಂಪತಿಗಳು ವೃತಧಾರಿಗಳಾಗಿ ಪೂಜೆಯಲ್ಲಿ ಕುಳಿತಿದ್ದರು.*
*ಜನಮಂಗಲ ಕಾರ್ಯಕ್ರಮದಡಿಯಲ್ಲಿ ಕಿಟ್ ವಿತರಿಸಲಾಯಿತು.*
*ಸ್ವಸಹಾಯ ಸಂಘದ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಕುಣಿತ ಭಜನೆ, ಭಕ್ತಿಗೀತೆ ಕಾರ್ಯಕ್ರಮ ನಡೆಸಿಕೊಟ್ಟರು** 🌸🌺