ಮುರುಡೇಶ್ವರ ದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿ ಗೆ ಬೋಲೇರೋ ಪಿಕ್ ಅಪ್ ವಾಹನ ಢಿಕ್ಕಿ- ಪಾದಚಾರಿ ಸ್ಥಳದಲ್ಲೇ ಸಾವು
ಭಟ್ಕಳ-ರಸ್ತೆ ದಾಟುತ್ತಿದ್ದ ಅಪರಿಚಿತ ಪಾದಚಾರಿ ವ್ಯಕ್ತಿಯಯೋರ್ವನಿಗೆ ಬೋಲೇರೋ ಪಿಕ್ ಅಪ್ ವಾಹನ
ಢಿಕ್ಕಿ ಹೊಡೆದು ಸ್ಥಳದಲ್ಲೇ ಪಾದಚಾರಿ ಸಾವನ್ನಪ್ಪಿರುವ ಘಟನೆ ಮುರುಡೇಶ್ವರ ರೈಲ್ವೆ ನಿಲ್ದಾಣ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯು ಸುಮಾರು 45 ರಿಂದ 50 ವರ್ಷದವನಾಗಿದ್ದು, ಹೊನ್ನಾವರ ಕಡೆಯಿಂದ ಭಟ್ಕಳದ ಕಡೆಗೆ ಬರುತ್ತಿದ್ದ ಬೋಲೇರೋ ಪಿಕ್ ಅಪ್ ವಾಹನ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮುರುಡೇಶ್ವರ ರೈಲ್ವೆ ನಿಲ್ದಾಣ ಎದುರಿನ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಅಪರಿಚಿತ ವ್ಯಕ್ತಿ ಢಿಕ್ಕಿ ಹೊಡೆದು ವಾಹನ ನಿಲ್ಲಿಸದೆ ಭಟ್ಕಳ ಕಡೆಗೆ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಪರಿಣಾಮ ವ್ಯಕ್ತಿಯ ತಲೆಗೆ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಕುರಿತು ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಬೋಲೇರೋ ಪಿಕ್ ಅಪ್ ವಾಹನ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.