ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಭಟ್ಕಳ ದ ಜನಪ್ರಿಯ ಮಾಜಿ ಶಾಸಕ ಸುನೀಲ್ ನಾಯ್ಕ
ಭಟ್ಕಳ-ಬೆಂಗಳೂರಿನ ಬಿಜೆಪಿ ಕಛೇರಿಗೆ ಭೇಟಿ ನೀಡಿ ಮಾನ್ಯ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರನ್ನು ಹಾಗೂ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ ಅವರನ್ನು ನಿನ್ನೆ ಭೇಟಿಯಾಗಿ ಶುಭಾಶಯ ಕೋರಿ ,ಅವರಿಗೆ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುವಂತೆ ಭಟ್ಕಳ ದ ಮಾಜಿ ಶಾಸಕ ಸುನೀಲ್ ನಾಯ್ಕ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಅವರು ಭಟ್ಕಳ- ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಪ್ರಸ್ತಕ ರಾಜಕೀಯ ಬೆಳವಣಿಗೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ರೊಂದಿಗೆ ಚರ್ಚೆ ನಡೆಸಿದರು.