ಉತ್ತರ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಹೊನ್ನಾವರದ ಕರ್ಕಿಯ ಎನ್.ಎಸ್. ಹೆಗಡೆ ಆಯ್ಕೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಅವರನ್ನು ನಿಯುಕ್ತಿಗೊಳಿಸಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ಎನ್.ಎಸ್. ಹೆಗಡೆ ಕರ್ಕಿ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯನ್ನೊಳಗೊಂಡ ಶಿವಮೊಗ್ಗ ವಿಭಾಗದ ಸಹಪ್ರಭಾರಿಯಾಗಿ ಜವಾಬ್ದಾರಿ ವಹಿಸಿದ್ದರು. 3 ಬಾರಿ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು.