ನಮ್ಮ ಸಂವಿಧಾನವು ದೇಶದ ಪವಿತ್ರ ಗ್ರಂಥ ಮತ್ತು ಸಾಮಾನ್ಯ ಜನರ ಧ್ವನಿ ಆಗಿದೆ- ಸಚಿವ ಮಾಂಕಳ ವೈದ್ಯ
ಕಾರವಾರ-ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಿದಾಗ ರಾಜ್ಯವು ರಾಮರಾಜ್ಯ ಆಗಲಿದೆ. ನಮ್ಮ ಸಂವಿಧಾನ ದೇಶದ ಪವಿತ್ರ ಗ್ರಂಥವಾಗಿದೆ. ಸಾಮಾನ್ಯ ಜನರ ಧ್ವನಿ ಆಗಿದ್ದು, ಅದರ ಆಶಯದಂತೆ ಬದುಕಲು ಸಮಾನ ಅವಕಾಶ ಕಲ್ಪಿಸಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.ಕಾರವಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಪೊಲೀಸ್, ಗೃಹರಕ್ಷಕ, ಅರಣ್ಯ ಇಲಾಖೆ, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ 14 ತಂಡಗಳು ಶಿಸ್ತುಬದ್ಧ ಪಥಸಂಚಲನ ನಡೆಸಿದವು. ರಾಜ್ಯ ಮಟ್ಟದ ಅಂಗವಿಕಲರ ಕ್ರೀಡಾಕೂಟದಲ್ಲಿ ಬಹುಮಾನಗಳಿಸಿದ ವಿದ್ಯಾರ್ಥಿಗಳಿಗೆ, ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪಡೆದ ಜಿಲ್ಲೆಯ ಮೂರು ಮಂದಿ ರೈತರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕಾರವಾರ ಶಾಸಕ ಸತೀಶ ಸೈಲ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಬಂದರು ಜಲಸಾರಿಗೆ ಮಂಡಳಿ ಸಿಇಒ ಜಯರಾಮ ರಾಯಚೂರ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಇದ್ದರು. ನಂತರ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.