ಮಾರ್ಚ ೨೮ ಕುಮಟದಲ್ಲಿ ಜಿಲ್ಲಾ ಮಟ್ಟದ ಅರಣ್ಯ ಅತಿಕ್ರಮಣದಾರರ ಸಮಾವೇಶ ;
ಶಿರಸಿ: ಜಿಲ್ಲಾ ಮಟ್ಟದ ಅರಣ್ಯ ಅತಿಕ್ರಮಣದಾರರ ಬೃಹತ್ ಸಮಾವೇಶವನ್ನ ಮಾರ್ಚ ೨೮ ಗುರುವಾರ ಕುಮಟದಲ್ಲಿ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಿಲ್ಲಾ ಮಟ್ಟದ ಅರಣ್ಯ ಅತಿಕ್ರಮಣದಾರ ವೇದಿಕೆಯ ಕಾರ್ಯಕಾರಿ ಸಮಿತಿಯ ಸಭೆಯು, ಅಧ್ಯಕ್ಷ ರವೀಂದ್ರ ನಾಯ್ಕ ಅಧ್ಯಕ್ಷತೆಯಲ್ಲಿ ಮಾರ್ಚ ೧೫ ರಂದು ಶಿರಸಿಯ ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ಜರುಗಿದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅರಣ್ಯವಾಸಿಗಳ ನಿಲುವನ್ನ ನಿರ್ಧರಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅರಣ್ಯವಾಸಿಗಳ ಸಮಾವೇಶವನ್ನ ಸಂಘಟಿಸಲು ನಿರ್ಧರಿಸಲಾಗಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.