ಭಟ್ಕಳದಲ್ಲಿ ಇಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ
ಭಟ್ಕಳ-ಭಟ್ಕಳದಲ್ಲಿ ಇಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ ನಡೆಯಿತು.
ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಜಿ ಶಾಸಕಿ ರೂಪಾಲಿ ನಾಯ್ಕ ಭಾರತೀಯ ಜನತಾ ಪಕ್ಷ ಅತ್ಯಂತ ದೊಡ್ಡ ಪಕ್ಷವಾಗಿ ಬೆಳೆದಿದೆ. ಒಬ್ಬರಿಂದ ಮಾತ್ರ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ದೇಶದ ಅಭಿವೃಧ್ದಿಗೆ ಎಲ್ಲರೂ ಕೈಜೋಡಿಸಿ ಕೆಲಸ ಮಾಡೋಣ. ಬೂತ್ ಸಮಿತಿಯಲ್ಲಿಯೂ ಮಹಿಳೆಯರಿಗೆ ಅವಕಾಶವನ್ನು ನೀಡಲಾಗಿದ್ದು, ಜವಾಬ್ದಾರಿಯುತವಾಗಿ ಕೆಲಸ ಮಾಡಲು ಸಹಾಯಕವಾಗಲಿದೆ.
ಮನೆ ಮನೆಗೆ ತೆರಳಿ ಸರ್ಕಾರದ ಯೋಜನೆಗಳ ಮಾಹಿತಿ ನೀಡಬೇಕು. ಅದರ ಲಾಭ ಪಡೆಯುವಂತೆ ಪ್ರೇರೇಪಿಸಬೇಕು.ನಮ್ಮ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಮಹಿಳೆಯರಿಗಾಗಿ ಶೇ. 33 ರಷ್ಟು ಮೀಸಲಾತಿಯನ್ನು ನೀಡಿದೆ. ಇದರಿಂದ ಹೆಚ್ಷಿನ ಸಂಖ್ಯೆಯಲ್ಲಿ ಮಹಿಳೆಯರು ರಾಜಕೀಯದಲ್ಲಿ ಬೆಳೆಯಲು ಅನುಕೂಲವಾಗಲಿದೆ.
ಪಕ್ಷದ ಘನತೆ ಗೌರವ ಕಾಪಾಡುವ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕು. ಕಾರ್ಯಕರ್ತರೇ ಪಕ್ಷಕ್ಕೆ ಜೀವಾಳ. ಕಾರ್ಯಕರ್ತರು ನನ್ನ ಮನದಲ್ಲಿದ್ದಾರೆ. ಅವರನ್ನು ನಾನು ಸದಾ ಸ್ಮರಿಸುತ್ತೇನೆ. ಎಲ್ಲೇ ಹೋದರೂ ಅವರನ್ನು ಪರಿಚಯಿಸುತ್ತೇನೆ.
ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಯೋಜನೆಯು ಫಲಾನುಭವಿಗೆ ತಲುಪದಿದ್ದರೆ ಅವರಿಗೆ ಯೋಜನೆ ಲಭಿಸುವಂತೆ ಮಾಡಬೇಕು. ಸರ್ಕಾರದ ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕು. ನಮ್ಮ ಪಕ್ಷದ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪರ್ಧಿಸಿದ್ದಾರೆ. ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸೋಣ. ನಮ್ಮ ಮೋದಿಜೀ ಅವರ ಕೈ ಬಲ ಪಡಿಸಲು ಮತ್ತು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಶ್ರಮಿಸೋಣ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಎನ್ ಎಸ್ ಹೆಗಡೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಶಿಲ್ಪಾ ಜಿ.ಸುವರ್ಣ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರು ಶ್ರೀಮತಿ ಶಿವಾನಿ ಶಾಂತಾರಾಮ, ಮಂಡಲದ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ನಾಯ್ಕ, ಹಿಂದುಳಿದ ವರ್ಗ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾದ ಶ್ರೀ ಈಶ್ವರ ನಾಯ್ಕ, ಜಿಲ್ಲಾ ಕಾರ್ಯದರ್ಶಿಗಳಾ ಶ್ರೀ ಶ್ರೀಕಾಂತ ನಾಯ್ಕ, ಶ್ರೀ ಸುಬ್ರಾಯ ದೇವಡಿಗ ಲೋಕಸಭೆ ಕ್ಷೇತ್ರದ ಸಂಚಾಲಕರಾದ ಶ್ರೀ ಗೋವಿಂದ ನಾಯ್ಕ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಆರತಿಗೌಡ ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನಕಾರ್ಯದರ್ಶಿಯಾದ ಶ್ರಿಮತಿ ಸುಜಾತಾ ಬಾಂದೇಕರ, ಶ್ರೀಮತಿ ಗೀತಾ ಶಿಕಾರಿಪುರ ಸೇರಿದಂತೆ ಮತ್ತಿತರ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.