ರಸ್ತೆ ಬದಿ ಮಲಗಿದ್ದವರ ಕಾರ್ಮಿಕರ ಮೇಲೆ ಹರಿದು ಕಾರು-5 ಜನರಿಗೆ ಗಂಭೀರ ಗಾಯ
ಶಿರಸಿ: ಶಿರಸಿ-ಕುಮಟಾ ರಸ್ತೆಯ ಹೀಪನಳ್ಳಿ ಕ್ರಾಸ್ ಬಳಿ ಕಾರೊಂದು ರಸ್ತೆ ಬದಿ ಮಲಗಿದ್ದವರ ಮೇಲೆ ಹರಿದು 5 ಜನ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ವೇಳೆ ನಡೆದಿದೆ ಎಂದು ತಿಳಿದುಬಂದಿದೆ.
ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಊಟ ಮಾಡಿ ವಿಶ್ರಮಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಕಾರ್ಮಿಕರು ಹೈದರಾಬಾದ್ ಮೂಲದವರೆಂದು ಹೇಳಲಾಗಿದೆ.