ಕೆ ಎಸ್ ಆರ್ ಟಿ ಸಿ ಬಸ್ಸು ಹಾಗು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರಿಬ್ಬರ ಸಾವು.
ಯಲ್ಲಾಪುರ-ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕರ್ನಾಟಕ ವಾಯುವ್ಯ ಸಾರಿಗೆ ಬಸ್ಸ ನಂಬರ್ KA31F1493 ಹಾಗೂ ಬೈಕಗಳ ನಡುವೆ ಡಿಕ್ಕಿಯಾಗಿ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಯಲ್ಲಾಪುರ ಸಮೀಪ ನಡೆದಿದೆ. ಮದ್ಯಾಹ್ನ ಸುಮಾರು 2.30 ರ ಸಮಯಕ್ಕೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ಮತ್ತು ಇನ್ನು ಹೆಚ್ಚಿನ ಮಾಹಿತಿ ಪೋಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.