ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಾಮಪತ್ರ ಸಲ್ಲಿಕೆ
ಕಾರವಾರ-ಕಾರವಾರ ನಗರದ ದೈವಜ್ಞ ಸಭಾಭವನದಿಂದ ಆರಂಭಗೊಂಡ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಗೋವಾ ಮುಖ್ಯಮಂತ್ರಿ ಶ್ರೀ ಪ್ರಮೊದ ಸಾವಂತ, ಲೋಕಸಭಾ ಕ್ಷೇತ್ರದ ಉಸ್ತುವಾರಿ ಶ್ರೀ ಹರತಾಳ ಹಾಲಪ್ಪ, ಹಿರಿಯ ನಾಯಕರು, ಶಾಸಕರೂ ಆದ ಶ್ರೀ ಬಸನಗೌಡ ಪಾಟೀಲ ಯತ್ನಾಳ, ರಾಜ್ಯ ಪ್ರಧಾನಕಾರ್ಯದರ್ಶಿ ಶ್ರೀ ಸುನೀಲ್ಕುಮಾರ, ಶಾಸಕರಾದ ಶ್ರೀ ಅರವಿಂದ ಬೆಲ್ಲದ, ಶ್ರೀ ದಿನಕರ ಶೆಟ್ಟಿ, ಶ್ರೀ ವಿಠ್ಠಲ ಹಲಗೇಕರ, ವಿಧಾನಪರಿಷತ್ ಶಾಸಕರಾದ ಶ್ರಿ ಎಸ್.ವಿ. ಸಂಕನೂರ, ಶ್ರೀ ಶಾಂತಾರಾಮ ಸಿದ್ದಿ, ಶ್ರೀ ಗಣಪತಿ ಉಳ್ವೇಕರ, ಮಾಜಿ ಶಾಸಕರಾದ ಶ್ರೀ ಅರವಿಂದ ಪಾಟೀಲ, ಶ್ರೀ ಸುನೀಲ ಹೆಗಡೆ, ರಾಜ್ಯ ಮಾಧ್ಯಮ ವಕ್ತಾರರಾದ ಶ್ರೀ ಹರಿಪ್ರಕಾಶ ಕೋಣೆಮನೆ, ಜಿಲ್ಲಾಧ್ಯಕ್ಷರಾದ ಎನ್.ಎಸ್.ಹೆಗಡೆ, ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯಕ ಸೇರಿದಂತೆ ಅನೇಕ ಬಿಜೆಪಿ ಪ್ರಮುಖರು ಪಾಲ್ಗೊಂಡಿದ್ದರು.
ಬಿಜೆಪಿ ಅಭ್ಯರ್ಥಿ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಗೆಲ್ಲಿಸುವ ಮೂಲಕ ಮೋದಿ ಜೀ ಅವರ ಕೈ ಬಲಪಡಿಸೋಣ , ಅತ್ಯಂತ ಹೆಚ್ಚಿನ ಅಂತರದ ಮೂಲಕ ಗೆಲ್ಲಿಸೋಣ. ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರು ಸ್ವಾರ್ಥ ಭಾವನೆ ಇಲ್ಲದೆ ಅಭಿವೃದ್ಧಿಯನ್ನು ಮಾಡಿದ್ದಾರೆ. ದೇಶದ ಪ್ರತಿ ಗ್ರಾಮೀಣ ಪ್ರದೇಶದಲ್ಲೂ ಜನರಿಗಾಗಿ ಶ್ರಮಿಸಿದ್ದಾರೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಜೆಪಿ ಕಾರ್ಯಕರ್ತರನ್ನು ಮಾನಸಿಕವಾಗಿ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ದಬ್ಬಾಳಿಕೆ ನಡೆಸುತ್ತಿದೆ. ಇಂತಹ ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ರೂಪಾಲಿ ನಾಯ್ಕ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು, ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.