ಇಂದು ಉತ್ತರ ಕನ್ನಡ ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀಮತಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಕೆ
ಕಾರವಾರ- ಇಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಡಾ.ಅಂಜಲಿ ನಿಂಬಾಳ್ಕರ್ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಳವೈದ್ಯ
ಉತ್ತರಕನ್ನಡದಲ್ಲಿ 30 ವರ್ಷದಿಂದ ಒಂದೇ ಒಂದು ಅಭಿವೃದ್ಧಿ ಮಾಡದೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸಿ ಗೆಲ್ಲುತ್ತಿದ್ದ ಬಿಜೆಪಿಯನ್ನ ಈ ಭಾರಿ ಜಿಲ್ಲೆಯ ಜನ ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಜಿಲ್ಲೆಯಲ್ಲಿ ಬದಲಾವಣೆಯ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿಸಿದರು. ಇಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಡಾ.ಅಂಜಲಿ ನಿಂಬಾಳ್ಕರ್ ಅವರು ನಾಮಪತ್ರ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾಂಕಳ ವೈದ್ಯ, ಆಡಳಿತ ಸುಧಾರಣ ಆಯೋಗದ ಅಧ್ಯಕ್ಷರಾದ ಶ್ರೀ ಆರ್.ವಿ.ದೇಶಪಾಂಡೆ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ಕಿತ್ತೂರು ಶಾಸಕರಾದ ಬಾಬಾ ಸಾಹೇಬ್ ಪಾಟೀಲ್ಉಪಸ್ಥಿತರಿದ್ದರು.ಜಿಲ್ಲೆಯಿಂದ ಬಂದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.