ಹುಬ್ಬಳ್ಳಿಯ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಬರ್ಬರ ಹತ್ಯೆ ಖಂಡಿಸಿ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಉತ್ತರ ಕನ್ನಡ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್ ಪ್ರತಿಭಟನೆ
ಕಾರವಾರ-ಹಾಡು ಹಗಲೆ ಒಬ್ಬ ಕಾಲೇಜು ವಿದ್ಯಾರ್ಥಿನಿಯನ್ನು ಹತ್ಯೆ ಮಾಡಿರುವುದು ಖಂಡನೀಯ.
ಕಾಂಗ್ರೆಸ್ ಸರ್ಕಾರ ಈ ಘಟನೆಯನ್ನು ನಿರ್ಲಕ್ಷಿಸುತ್ತಿದೆ.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಗೃಹ ಸಚಿವರಾದ ಜಿ.ಪರಮೇಶ್ವರ ಅವರು ಕೂಡಲೆ ರಾಜಿನಾಮೆಯನ್ನು ನೀಡಬೇಕು. ಕಾಂಗ್ರೆಸ್ ಸರ್ಕಾರ ಜನರ ರಕ್ಷಣೆ ಮಾಡಲು ವಿಫಲವಾಗಿದೆ. ಮತ ಬ್ಯಾಂಕ್‌ಗಾಗಿ, ಅನ್ಯ ಕೋಮಿನ ಓಲೈಕೆಗಾಗಿ ಸರ್ಕಾರ ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅನೇಕ ಹೇಯ ಕೃತ್ಯಗಳಿಗೆ ಅವಕಾಶ ಮಾಡಿ ಕೊಡುತ್ತಿದೆ.ನೇಹಾ ಹಿರೇಮಠ ಹತ್ಯೆಯಲ್ಲಿ ಅರೋಪಿಗೆ ಕಠಿಣ ಶಿಕ್ಷೆ ನೀಡಿ. ಇಂತಹ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿ. ಇಷ್ಟೆಲ್ಲ ಗ್ಯಾರಂಟಿಗಳನ್ನು ಕೊಟ್ಟಿದ್ದೇನೆ ಎಂದು ಹೇಳುವ ಮುಖ್ಯಮಂತ್ರಿಗಳೆ,. ಇನ್ನೊಂದು ಗ್ಯಾರಂಟಿ ಕೊಡಿ ಮಹಿಳೆಯರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅವರ ರಕ್ಷಣೆ ಮಾಡುತ್ತೇವೆ, ಅವರಿಗೆ ಅನ್ಯಾಯವಾದರೆ ಕಠಿಣ ಶಿಕ್ಷೆ ವಿಧಿಸುವ ಗ್ಯಾರಂಟಿಯನ್ನೂ ನೀಡಿ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಶ್ರೀಮತಿ ರೂಪಾಲಿ ನಾಯ್ಕ ತಿಳಿಸಿದರು.ಬೃಹತ್ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ತೆರಳಿದಾಗ ಅವರು ಆಗಮಿಸಲಿಲ್ಲ. ಬಳಿಕ ಮಹಿಳಾ ಪೊಲೀಸರಿಗೆ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಎನ್.ಎಸ್.ಹೆಗಡೆ, ಕುಮಟಾ ಶಾಸಕರಾದ ಶ್ರೀ ದಿನಕರ ಶೆಟ್ಟಿ, ವಿಧಾನ ಪರೀಷತ್ತು ಸದಸ್ಯರಾದ ಶ್ರೀ ಶಾಂತಾರಾಮ ಸಿದ್ದಿ, ಬಿಜೆಪಿ ಮಂಡಲದ ಅಧ್ಯಕ್ಷರಾದ ಶ್ರೀ ನಾಗೇಶ ಕುರ್ಡೇಕರ, ಶ್ರೀ ಸುಭಾಷ ಗುನಗಿ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ ನಾಯಕ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಶಾಂತ ನಾಯ್ಕ, ಶ್ರೀ ಗುರುಪ್ರಸಾದ ಹೆಗಡೆ, ಶ್ರೀ ನಾಗರಾಜ ನಾಯಕ, ಮಂಡಲದ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ, ಬೂತ್ ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.