ಸಿದ್ದಾಪುರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ವಸಂತ್ ನಾಯ್ಕ್ ರಾಜಿನಾಮೆ
ಶಿರಸಿ: ಸಿದ್ದಾಪುರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ವಸಂತ್ ನಾಯ್ಕ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆಂಬ ಮಾಹಿತಿ ತಿಳಿದುಬಂದಿದೆ.
ವಸಂತ ನಾಯ್ಕ ಅವರು ಕಳೆದ ಮೂರು ವರ್ಷಕ್ಕೂ ಹೆಚ್ಚಿನ ಕಾಲ ಸಿದ್ದಾಪುರ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿ ತಾಲೂಕಿನಾದ್ಯಂತ ನಿಷ್ಠೆಯಿಂದ ಪಕ್ಷದ ಸಂಘಟನೆ ಮಾಡಿದ್ದರು. ಆದರೆ ಅವರ ವಯಕ್ತಿಕ ಕಾರಣಗಳಿಂದ ಇನ್ನು ಮುಂದೆ ಪಕ್ಷದ ಸಂಘಟನೆಯಲ್ಲಿ ಸಕ್ರೀಯವಾಗಿ ಭಾಗವಹಿಸಲು ಸಾಧ್ಯವಾಗದಿರುವುದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಿರಸಿ ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಅವರಿಗೆ ಪತ್ರ ಬರೆದಿದ್ದಾರೆ.
ಇನ್ನೂ ಇಷ್ಟು ವರ್ಷಗಳ ಕಾಲ ಪಕ್ಷ ಸಂಘಟನೆಗೆ ಸಹಕಾರ ನೀಡಿದ ಎಲ್ಲರಿಗೂ ವಸಂತ ನಾಯ್ಕ್ ಧನ್ಯವಾದ ತಿಳಿಸಿದ್ದು ತಮ್ಮ ರಾಜಿನಾಮೆಯನ್ನು ಪುರಸ್ಕರಿಸಿ ಬೇರೆಯವರಿಗೆ ಅವಕಾಶ ನೀಡುವಂತೆ ವಿನಂತಿಸಿದ್ದಾರೆ.