ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಲ್ಲಿ ಕನ್ನಡ ಭಾಷೆಗೆ ಪ್ರತಿಶತ 100 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಭಟ್ಕಳ ಕನ್ನಡ ಸಾಹಿತ್ಯ ಪರಿಷತ್ ನಿಂದ ಪ್ರತಿಭಾ ಪುರಸ್ಕಾರ
ಭಟ್ಕಳ-ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ನಾಡು ನುಡಿ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ಬೀನಾ ವೈದ್ಯ ಶಿಕ್ಷಣ ಸಂಸ್ಥೆ ಯ ಆಡಳಿತ ನಿರ್ದೇಶಕಿ ಡಾ.ಪುಷ್ಪಲತಾ ಎಂ.ಎಸ್.ನುಡಿದರು. ಅವರು ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮತ್ತು ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಡೆದ ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷೆಗೆ ಪ್ರತಿಶತ 100 ಅಂಕಗಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಕನ್ನಡ ಭಾಷೆ ನಮ್ಮ ತಾಯ್ನುಡಿ. ನಾಡು ನುಡಿಯ ಕುರಿತು ಅಭಿಮಾನ, ಮತ್ತು ಸೇವೆಯನ್ನು ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುತ್ತಿರುವುದು ನಿಜಕ್ಕೂ ಅಭಿನಂದನಾರ್ಹ. ಪರಿಷತ್ತಿನ ಕನ್ನಡ ಪರ ಕಾರ್ಯಕ್ರಮಗಳಿಗೆ ತಮ್ಮ ಸಹಕಾರ ಸದಾ ನೀಡುವುದಾಗಿ ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಬಿಎನ್ ವಾಸರೆ ಮಾತನಾಡಿ
ಜಿಲ್ಕೆಯಾದ್ಯಂತ ಕನ್ನಡ ಭಾಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪರಿಷತ್ತು ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಬೇರೆ ಯಾವ ಜಿಲ್ಲೆಯಲ್ಲೂ ನಡೆಯದ ಕಾರ್ಯಕ್ರಮ ನಮ್ಮ ಜಿಲ್ಲೆಯಲ್ಲಿ ನಡೆಯುತ್ತಿದೆ. ಅನುದಾನದ ಕೊರತೆಯಿದ್ದರೂ ಮುಂದೆಯೂ ಕಾರ್ಯಕ್ರಮ ತಪ್ಪದೇ ನಡೆಯಲಿದೆ. ವಿದ್ಯಾರ್ಥಿಗಳ ಭವಿಷ್ಯದ ಸಾಧನೆಗೆ ಈ ಪುರಸ್ಕಾರ ಮುನ್ನುಡಿ ಬರೆಯಲಿ ಎಂದು ಹಾರೈಸಿದರು. ಪ್ರಾಸ್ತಾವಿಕ ನುಡಿಗಳನ್ನು ನಾಡಿದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಪ್ರಾಸ್ತಾವಿಕ ನುಡಿಗಳನ್ನಾಡಿ ಕನ್ನಡ ಭಾಷೆಯ ಭಾಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು, ಜೊತೆಗೆ ಸಾಧನೆಗೆ ಬೆಂಬಲವಾಗಿ ನಿಂತ ಶಿಕ್ಷಕರನ್ನು ಅಭಿನಂದಿಸುತ್ತಿರುವುದು ಪರಿಷತ್ತಿಗೆ ಅತ್ಯಂತ ಸಂತಸ ಕೊಡುವ ಸಂಗತಿ. ಕಳೆದೊಂದು ವಾರದಿಂದ ಜಿಲ್ಲಾಧ್ಯಂತ ಎಲ್ಲಾ ತಾಲೂಕುಗಳಲ್ಲಿ ಕನ್ನಡ ಭಾಷಾ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಕಾರ್ಯಕ್ರಮ ನಡೆಯುತ್ತಿದ್ದು ಜಿಲ್ಲೆಯಾದ್ಯಂತ ಕನ್ನಡ ಕಲರವ ಮೊಳಗುತ್ತಿದ್ದು ಇದು ಎಲ್ಲರ ಪ್ರೀತಿ ಮತ್ತು ಮನ್ನಣೆಗೆ ಪಾತ್ರವಾಗಿದೆ. ವಿದ್ಯಾರ್ಥಿಗಳು ಉತ್ತಮ ಅಂಕದ ಜೊತೆಗೆ ಓದುವ, ಬರೆಯುವ ಭಾಷಾ ಕೌಶಲವನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದರು.
ಕಾರ್ಯಕ್ರಮದಲ್ಲಿ ಪ್ರಥಮ ಭಾಷೆ ಮತ್ತು ದ್ವಿತೀಯ ಭಾಷೆ ಕನ್ನಡದಲ್ಲಿ ಪ್ರತಿ ಸದಾ ನೂರು ಅಂಕಗಳನ್ನು ಗಳಿಸಿದ 58 ವಿದ್ಯಾರ್ಥಿಗಳನ್ನು ಹಾಗೂ ವಿದ್ಯಾರ್ಥಿಗಳ ಸಾಧನೆಗೆ ಕಾರಣರಾದ ಶಿಕ್ಷಕರನ್ನು ಗೌರವಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಸ್ಪಂದನ ಸಂಸ್ಥೆಯ ಅಧ್ಯಕ್ಷರಾದ ರಾಘವೇಂದ್ರ ನಾಯ್ಕ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ, ಬಹುಮಾನ ವಿತರಿಸಿದರು. ಕಾರ್ಯಕ್ರಮ ದ ವೇದಿಕೆಯಲ್ಲಿ ಉಪಸ್ಥಿತರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ್, ಸಾಹಿತಿ ಮಾನಸುತ ಶಂಭು ಹೆಗಡೆ ಕಸಾಪ ಗೌರವ ಕಾರ್ಯದರ್ಶಿ ಪಿ.ಆರ್ ನಾಯ್ಕ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಮೋಹನ ನಾಯ್ಕ ಮಾತನಾಡಿದರು. ಸಾಹಿತಿ ನಾರಾಯಣ ಯಾಜಿ ಶಿರಾಲಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ನಾಯಕ ಮಾಧ್ಯಮಿಕ ಶಾಲಾ ಸಂಘದ ಅಧ್ಯಕ್ಷ ಶಬ್ಬೀರ್ ದಫೇದಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಲ್ಲಾಸ್ ನಾಯ್ಕ,ಹೊನ್ನಾವರ ಕಸಾಪ ತಾಲೂಕಾಧ್ಯಕ್ಷ ಎಸ್.ಎಚ್.ಗೌಡ, ಜನತಾ ವಿದ್ಯಾಲಯದ ಪ್ರಾಂಶುಪಾಲ ಅಮೃತ ರಾಮರಾಥ ಮುಂತಾದವರು ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಏಶಿಯನ್ ಸ್ಪೆಸಿಫಿಕ್ ಎಕ್ಸಲೆನ್ಸ ಅವಾರ್ಡನಿಂದ ಪುರಸ್ಕೃತ ಬೀನ ವೈದ್ಯ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕಿ ಪುಷ್ಪಲತಾ ಎಂ ಎಸ್, ಸ್ಪಂದನ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾಯ್ಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಶ್ರೀಧರ್ ಶೇಟ್ ಎಲ್ಲರನ್ನು ಸ್ವಾಗತಿಸಿದರು.ಶಿಕ್ಷಕ ಪರಮೇಶ್ವರ್ ನಾಯ್ಕ ಮತ್ತು ನಾರಾಯಣ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕಸಾಪ ಕಾರ್ಯಕಾರಿ ಸಮಿತಿ ಸಂಘಟನಾ ಕಾರ್ಯದರ್ಶಿ ಸಂತೋಷ ಆಚಾರ್ಯ, ಸದಸ್ಯರಾದ ಪೆಟ್ರಿಕ್ ಟೆಲ್ಲಿಸ್, ಗಣೇಶ ಯಾಜಿ, ಪೂರ್ಣಿಮ ಕರ್ಕಿಕರ್ , ಮುರ್ಡೇಶ್ವರ ಗ್ರಾಮೀಣ ಪ್ರತಿಷ್ಠಾನದ ಮುಖ್ಯಸ್ಥರಾದ ಎಸ್.ಎಸ್.ಕಾಮತ್, ಸ್ಪಂದನ ಸಂಸ್ಥೆಯ ಪಾಂಡುರಂಗ ನಾಯ್ಕ, ಭವಾನಿಶಂಕರ ನಾಯ್ಕ, ಶಿವಾನಂದ ನಾಯ್ಕ , ಶಿಕ್ಷಕರಾದ ಪಿ.ಟಿ.ಚವ್ಹಾಣ, ಆಶಾ ಭಟ್, ಹೇಮಾವತಿ ನಾಯ್ಕ, ಶಬ್ಬೀರ, ಮಮತಾ ಭಟ್ಕಳ, ಪವಿತ್ರಾ ಮೊಗೇರ, ರೇಣುಕಾ ನಾಯಕ, ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪಾಲಕ ವೃಂದದವರು ಉಪಸ್ಥಿತರಿದ್ದರು.