ಭಟ್ಕಳ ತಲಾಂದದಲ್ಲಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿತ
ಭಟ್ಕಳ : ಇಂದು ಸಂಜೆ ವೇಳೆ ಸುರಿದ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದ ಘಟನೆ ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ತಲಾಂದ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಿ ದುರ್ಗಪ್ಪ ನಾಯ್ಕ ಎಂಬುವವರಿಗೆ ಸೇರಿದ ಮನೆ ಹಾನಿಗೊಳಗಾಗಿದೆ. ಇಂದು ಸಂಜೆ ವೇಳೆ ಕೆಲ ಸಮಯ ಸುರಿದ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದ ಹಿನ್ನೆಲೆ ಕೆಲವೆಡೆ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಘಟನೆ ವೇಳೆ ಮನೆಯವರು ಪಕ್ಕದ ಕೋಣೆಯಲ್ಲಿ ಇದ್ದ ಕಾರಣ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
ಸ್ಥಳಕ್ಕೆ ಮುಟ್ಟಳ್ಳಿ ಗ್ರಾಮ ಪಂಚಾಯತಿಯ ಗ್ರಾಮ ಆಡಳಿತ ಅಧಿಕಾರಿ ಹಾಗೂ ಗ್ರಾಮ ಸಹಾಯಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.