*ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲ*ವತಿಯಿಂದ
ನೂತನ ಸಂಸದರಾದ ಸನ್ಮಾನ್ಯ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸನ್ಮಾನ
ಭಟ್ಕಳ-ಬಿಜೆಪಿ ಭಟ್ಕಳ ಮಂಡಲದ ವತಿಯಿಂದ ಇಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಸನ್ಮಾನ್ಯ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣೆ ಕಾರ್ಯಕ್ರಮವನ್ನು ಇಂದು ಭಟ್ಕಳ ನಿಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.
ಮಂಡಲದ ಅಧ್ಯಕ್ಷರಾದ ಶ್ರೀ ಲಕ್ಷ್ಮಿನಾರಾಯಣ ನಾಯ್ಕ ಅವರು ಸರ್ವರನ್ನು ಸ್ವಾಗತಿಸಿ, ಚುನಾವಣಾ ಸಂದರ್ಭದಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಪಕ್ಷದ ಪ್ರಮುಖರ ಹಾಗೂ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಿ ಪ್ರಸ್ತಾವಿಕ ಮಾತನಾಡಿದರು.
ಸನ್ಮಾನ್ಯ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅನಂತರ ಬಿಜೆಪಿ ಭಟ್ಕಳದ ಮಂಡಲದ ವತಿಯಿಂದ ನೂತನ ಸಂಸದರಾದ ಸನ್ಮಾನ್ಯ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಸನ್ಮಾನಿಸಲಾಯಿತು.
ಉತ್ತರ ಕನ್ನಡ ಲೋಕಸಭಾ ಚುನಾವಣಾ ಸಂಚಾಲಕರಾದ ಶ್ರೀ ಗೋವಿಂದ ನಾಯ್ಕ, ಮಾಜಿ ಸಚಿವರಾದ ಶ್ರೀ ಶಿವಾನಂದ ನಾಯ್ಕ, ಲೋಕಸಭಾ ಚುನಾವಣಾ ತಾಲೂಕ ಪ್ರಭಾರಿಗಳಾದ ಡಾ ಜಿ ಜಿ ಹೆಗಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಶಿವಾನಿ ಶಾಂತರಾಮ, ಜಿಲ್ಲಾ ಕಾರ್ಯದರ್ಶಿ ಶ್ರೀ ಸುಬ್ರಾಯ ದೇವಾಡಿಗ, ರಾಜ್ಯ ಹಿಂದುಳಿದ ಮೋರ್ಚ ಉಪಾಧ್ಯಕ್ಷರಾದ ಶ್ರೀ ಈಶ್ವರ ನಾಯ್ಕ, ಮಾಜಿ ಶಾಸಕರಾದ ಶ್ರೀ ಸುನಿಲ್ ಬಿ. ನಾಯ್ಕ ಮೊದಲಾದವರು ಮಾತನಾಡಿ ಸನ್ಮಾನ್ಯ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಅಭಿನಂದಿಸಿದರು. ಜೊತೆಗೆ ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಸಮಸ್ಯೆಗಳಿಗೆ ತಕ್ಷಣ ನೆರವಾಗುವಂತೆ ಮನವಿ ಮಾಡಿದರು.
ಜಿಲ್ಲಾಧ್ಯಕ್ಷರಾದ ಶ್ರೀ ಎನ್ ಎಸ್ ಹೆಗಡೆ ಅವರು ಮಾತನಾಡಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಸಮರ್ಪಿಸಿ, ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಮನವಿ ಮಾಡಿದರು.
ಕಾರ್ಯಕ್ರಮದ ಕೇಂದ್ರ ಬಿಂದುವಾದ ನೂತನ ಸಂಸದರಾದ ಸನ್ಮಾನ್ಯ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮಾತನಾಡಿ ಇತ್ತೀಚೆಗೆ ಅನಾರೋಗ್ಯದಿಂದ ನಿಧನರಾದ ಪಕ್ಷದ ನಿಷ್ಠಾವಂತ ಕಾರ್ಯಕರ್ತ ದಿ. ಸಚಿನ್ ಮಹಾಲೆಯವರನ್ನು ನೆನೆದು ಪಕ್ಷಕ್ಕಾಗಿ ಶ್ರಮಿಸಿದ ಅವರ ಕಾರ್ಯಗಳನ್ನು ಸ್ಮರಿಸಿದರು.
ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿವಿಧ ಸಮಸ್ಯೆಗಳನ್ನು ವಿವರಿಸಿ ಹೇಳಿ ಅದಕ್ಕೆ ಶೀಘ್ರವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಅಲ್ಲದೆ ಅತಿ ಹೆಚ್ಚು ಅಂತರದಿಂದ ಗೆಲುವಿಗೆ ಸಹಕಾರ ನೀಡಿದ ಭಟ್ಕಳದ ಮತದಾರರಿಗೆ ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಭಟ್ಕಳ ಮಂಡಲದ ಪ್ರಭಾರಿಗಳಾದ ಶ್ರೀ ಹೇಮಂತ ಗಾಂವ್ಕರ್, ಜಿಲ್ಲಾ ಕಾರ್ಯದರ್ಶಿ ಶ್ರೀ ಶ್ರೀಕಾಂತ ನಾಯ್ಕ, ಪ್ರಮುಖರಾದ ಶ್ರೀ ಕೇದಾರ ಕೊಲ್ಲೆ, ಶ್ರೀ ರವಿ ನಾಯ್ಕ, ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಂಡಲದ ಪದಾಧಿಕಾರಿಗಳು, ಪಕ್ಷದ ಪ್ರಮುಖರು, ಪಕ್ಷದ ಹಿತೈಷಿಗಳು, ವಿವಿಧ ಸಮಾಜದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ವಿವಿಧ ಸಮಾಜದ ಪ್ರಮುಖರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಪದಾಧಿಕಾರಿಗಳು ನೂತನ ಸಂಸದರನ್ನು ಸನ್ಮಾನಿಸಿ ಅಭಿನಂದಿಸಿದರು.
ಪಕ್ಷದ ಪ್ರಮುಖರಾದ ಶ್ರೀ ಧನ್ಯಕುಮಾರ ಜೈನ್ ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀ ಶ್ರೀನಿವಾಸ ನಾಯ್ಕ ಅವರು ಕಾರ್ಯಕ್ರಮ ನಿರೂಪಿಸಿದರು. ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀಧರ ನಾಯ್ಕ ಅವರು ವಂದಿಸಿದರು.