ಉತ್ತರ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು, ಪ್ರಾಂಶುಪಾಲರ ಸಂಘದಿಂದ ನೂತನ ಉಪನಿರ್ದೇಶಕರಿಗೆ ಸನ್ಮಾನ
ಭಟ್ಕಳ :ಉತ್ತರ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಗಳ ಸಂಘದ ವತಿಯಿಂದ ಶುಕ್ರವಾರ ಯಲ್ಲಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಾಂಶುಪಾಲರ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜು ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿರುವ ರಾಜಪ್ಪ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತಾಡಿದ ನೂತನ ಉಪನಿರ್ದೇಶಕ ರಾಜಪ್ಪ ಮಾತನಾಡಿ, ಬರುವ ವರ್ಷದಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವುದು, ದ್ವಿತೀಯ ಪಿಯು ಫಲಿತಾಂಶದಲ್ಲಿ ಹೆಚ್ಚಳ ಮಾಡುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದರು. ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವಂತಾಗಲು ಪ್ರಾಂಶುಪಾಲರು ಶ್ರಮ ವಹಿಸಬೇಕು ಎಂದು ಕರೆ ನೀಡಿದರು. ಈ ವರ್ಷ ಉತ್ತಮ ಫಲಿತಾಂಶ ಬಂದಿದೆ. ಇನ್ನು ಸ್ವಲ್ಪ ಪ್ರಯತ್ನ ಪಟ್ಟರೆ,ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಮತ್ತು ದ್ವಿತೀಯ ಸ್ಥಾನ ಪಡೆಯಬಹುದು ಎಂದ ಅವರು, ಇದಕ್ಕಾಗಿ ಎಲ್ಲ ಪ್ರಾಂಶುಪಾಲರೂ ಸಹಕರಿಸಬೇಕು ಎಂದರು. ಆಡಳಿತಾತ್ಮಕ ಸಮಸ್ಯೆಗಳ ಕುರಿತು ಮಾನಾಡಿದ ಅವರು ಇದ್ದ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಸಮಸ್ಯೆ ಪರಿಹಾರ ಆಗುತ್ತದೆ. ನನ್ನಿಂದ ಏನೆಲ್ಲಾ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇನೆ ಕಾಲೇಜು ಮಟ್ಟದಲ್ಲಿ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಇಟ್ಟುಕೊಳ್ಳುವುದರ ಮೂಲಕ ಆಡಳಿತವನ್ನು ಸುಸೂತ್ರವಾಗಿ ನೆರವೇರುವಂತೆ ಸಹಕರಿಸಬೇಕು ಎಂದರು
ಈ ಸಂದರ್ಭದಲ್ಲಿ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಎ.ಬಿ. ರಾಮರಥ್ ಸೇರಿದಂತೆ ಸಂಘದ ಪದಾಧಿಕಾರಿಗಳು ಜಿಲ್ಲೆಯ ಪ್ರಾಂಶುಪಾಲರು ಉಪಸ್ಥಿತರಿದ್ದರು.