ಕಾರವಾರದ ಕಾಳಿ ನದಿಯ ಸೇತುವೆ ಕುಸಿದ ವೇಳೆ ಸಮಯಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿ- ತಪ್ಪಿದ ದೊಡ್ಡ ದುರಂತ
ಕಾರವಾರ: ಕಾಳಿ ನದಿಯ ಸೇತುವೆ ಕುಸಿದ ವೇಳೆ ಹೆಚ್ಚಿನ ಅವಘಡ ಸಂಭವಿಸದಂತೆ ಸಮಯಪ್ರಜ್ಞೆಯಿಂದ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ರಾತ್ರಿ ಸೇತುವೆಯ ಬಳಿ ಚಿತ್ತಾಕುಲ ಪೊಲೀಸ್ ಠಾಣೆಯ ಸಿಬ್ಬಂದಿ ವಿನಯ ಕಾಣಕೋಣಕರ ರಾತ್ರಿ ಗಸ್ತಿನಲ್ಲಿದ್ದ ವೇಳೆ ಸೇತುವೆ ಕುಸಿದ ಬಗ್ಗೆ ಮಾಹಿತಿ ಪಡೆದ ಅವರು ಹೆಚ್ಚಿನ ಅವಘಡವಾಗದಂತೆ ನಾಲ್ಕು ಲಾರಿಗಳು ಹಾಗೂ ಕೆಲವು ವಾಹನಗಳನ್ನು ಓವರ್ ಟೇಕ್ ಮಾಡಿ ತಡೆದು, ಬಳಿಕ ಠಾಣೆಯ ಪಿಎಸ್ಐ ಮಾಂತೇಶ ಹಾಗು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ಲಾರಿಯೊಂದು ಬಿದ್ದ ಬಗ್ಗೆ ತಿಳಿದು ಸ್ಥಳೀಯ ಮೀನುಗಾರರ ಸಹಾಯದಿಂದ ಬೋಟ್ ಮೂಲಕ ತೆರಳಿ ಲಾರಿ ಚಾಲಕನನ್ನು ರಕ್ಷಿಸಿದ್ದಾರೆ. ಅವರ ಈ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸ್ವಾತಂತ್ರ ದಿನದಂದು ಪೊಲೀಸ್ ಸಿಬ್ಬಂದಿ ಹಾಗೂ ರಕ್ಷಣೆ ಕಾರ್ಯದಲ್ಲಿ ಪಾಲ್ಗೊಂಡ ಸ್ಥಳೀಯ ಮೀನುಗಾರರಿಗೂ ಸನ್ಮಾನ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದ್ದಾರೆ.