ಹಳಿಯಾಳದಲ್ಲಿ 96 ವರ್ಷದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮುಂಗೇಶ ಕೃಷ್ಣ ಪಾಟೀಲಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಯಿಂದ ಸನ್ಮಾನ
ಕಾರವಾರ:- ಹಳಿಯಾಳ ತಾಲೂಕಿನ ಮಂಗಳವಾಡ ಗ್ರಾಮದ 96 ವರ್ಷದ ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಮಂಗೇಶ ಕೃಷ್ಣ ಪಾಟೀಲ ಅವರ ಮನೆಗೆ ಶುಕ್ರವಾರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಭೇಟಿ ನೀಡಿ, ಜಿಲ್ಲಾಡಳಿತದ ಪರವಾಗಿ ಸನ್ಮಾನಿಸಿ, ಗೌರವಿಸಿದರು.
ಮಂಗೇಶ ಕೃಷ್ಣ ಪಾಟೀಲ ಅವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕಾರವಾರ ಜೈಲಿನಲ್ಲಿ 2 ವರ್ಷಗಳ ಶಿಕ್ಷೆಗೆ ಒಳಗಾಗಿದ್ದರು.
ಈ ಸಂದರ್ಭದಲ್ಲಿ ಹಳಿಯಾಳ ತಹಸೀಲ್ದಾರ್ ಪ್ರವೀಣ ಉಚ್ಚಣ್ಣನವರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಶುರಾಮ್ ಮತ್ತಿತರರು ಉಪಸ್ಥಿತರಿದ್ದರು.