ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾರವಾರದಲ್ಲಿ ಬ್ರಹತ ಪ್ರತಿಭಟನೆ
ಕಾರವಾರ-ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ದುರುದ್ದೇಶದಿಂದ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಮಾನ್ಯ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕೆ. ಪಿ. ಸಿ ಸಿ ಅಧ್ಯಕ್ಷರಾದ ಶ್ರೀ ಡಿ. ಕೆ. ಶಿವಕುಮಾರ್ ಅವರ ಸೂಚನೆಯಂತೆ ಇಂದು ಜಿಲ್ಲಾ ಕೇಂದ್ರ ಕಾರವಾರದಲ್ಲಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಮಿತ್ರಸಮಾಜ ಸಮುದಾಯಭವನದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ತೆರಳಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ,ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಳಿಯಾಳ ಶಾಸಕರಾದ ಶ್ರೀ ಆರ್. ವಿ. ದೇಶಪಾಂಡೆಯವರು, ಕೆ. ಎಸ್. ಎಂ. ಸಿ. ಲಿಮಿಟೆಡ್ ಅಧ್ಯಕ್ಷರು ಕಾರವಾರ ಶಾಸಕರಾದ ಶ್ರೀ ಸತೀಶ್ ಸೈಲ್, ಶಿರಸಿ ಶಾಸಕರಾದ ಶ್ರೀ ಭೀಮಣ್ಣ ನಾಯ್ಕ, ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಸಾಯಿ ಗಾಂವ್ಕರ್, ಕೆ. ಪಿ. ಸಿ. ಸಿ ಕಾರ್ಯದರ್ಶಿಗಳಾದ ಶ್ರೀ ನಿವೇದಿತ್ ಆಳ್ವ, ಗ್ಯಾರಂಟಿ ಕಮಿಟಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ನಾಯ್ಕ , ಕಾಂಗ್ರೆಸ್ ಮುಖಂಡ ರವೀಂದ್ರ ನಾಯ್ಕ್ ಶಿರಸಿ ಮುಂತಾದವರು ಉಪಸ್ಥಿತರಿದ್ದರು.